ಸುಬ್ರಹ್ಮಣ್ಯ : ಸುಬ್ರಹ್ಮಣ್ಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 17 ವರ್ಷದ ದ್ವಿತೀಯ ಪಿ ಯು ಸಿ ವಿದ್ಯಾರ್ಥಿನಿಯೋರ್ವಳ ಮಾನಭಂಗಕ್ಕೆ ಯತ್ನ ನಡೆದಿರುವ ಘಟನೆ ವರದಿಯಾಗಿದೆ.
ಗುರುವಾರ ಸಂಜೆ ಸುಮಾರು 4:15 ಕ್ಕೆ ಕಾಲೇಜ್ ಬಿಟ್ಟು ಮನೆಗೆ ಹಿಂತಿರುಗಲು ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿರುವ ಸಂದರ್ಭದಲ್ಲಿ ಹಪೀದ್ ಎಂಬಾತನು ವಿದ್ಯಾರ್ಥಿಯನ್ನು ಪ್ರೀತಿಸುವಂತೆ ಒತ್ತಡ ಹಾಕಿ ಆಕೆಯ ದೂರವಾಣಿ ಸಂಖ್ಯೆಯನ್ನು ಕೇಳಿದಾಗ ಅದಕ್ಕೆ ಅವಳು ನಿರಾಕರಿಸಿದ್ದು ಆಗ ಅವಳ ಕೈ ಹಿಡಿದು ಎಳೆದು ಮಾನಭಂಗಕ್ಕೆ ಯತ್ನಿಸಿ ಬೆದರಿಕೆ ಹಾಕಿದ್ದು
ಆಕೆ ಅಲ್ಲಿಂದ ತಪ್ಪಿಸಿಕೊಂಡು ಮನೆಗೆ ಹೋಗಿರುತ್ತಾಳೆ ಎನ್ನಲಾಗಿದೆ. ವಿದ್ಯಾರ್ಥಿನಿಯ ಹೆತ್ತವರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ
ದೂರು ನೀಡಿದ್ದು ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ