ತೊಡಿಕಾನದಲ್ಲಿ ಗ್ರಾಮ ವಾಸ್ತವ್ಯ

ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರಕಾರದ ಸೌಲಭ್ಯಗಳನ್ನು ಒದಗಿಸಿಕೊಡುವುದು ಗ್ರಾಮ ವಾಸ್ತವ್ಯದ ಮೂಲ ಉದ್ದೇಶವಾಗಿದೆ ಎಂದು ಸುಳ್ಯ ಪ್ರಭಾರ ತಹಶೀಲ್ದಾರ್ ಮಂಜುನಾಥ್ ಹೇಳಿದರು ಅವರು ತಾಲೂಕು ಆಡಳಿತ ಸುಳ್ಯ ಇದರ ನೇತೃತ್ವದಲ್ಲಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ಅಕ್ಷಯ ಮಂದಿರದಲ್ಲಿ ನಡೆದ ವಿವಿಧ ಇಲಾಖೆಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿದರು.
ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಪ್ರತಿಯೊಂದು‌ ಇಲಾಖೆಯ ಅಧಿಕಾರಿಗಳು ಹಾಜರಿರುತ್ತಾರೆ.ಸಂಬಂಧಪಟ್ಟ ಇಲಾಖೆಯ ಸೌಲಭ್ಯಗಳನ್ನು ಸ್ಥಳದಲ್ಲಿ ಪಡೆದುಕೊಳ್ಳಬಹುದು ಮತ್ತು ಸಮಸ್ಯೆಯನ್ನು ಸ್ಥಳದಲ್ಲಿಯೇ ಪರಿಹರಿಸಿಕೊಳ್ಳಬಹುದೆಂದು ಅವರು ಹೇಳಿದರು.
ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಹರಿಣಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿದರು.ಸುಳ್ಯ ತಾಲೂಕು ವೈದ್ಯಾಧಿಕಾರಿ ಡಾ.ನಂದಕುಮಾರ್ ಮಾತನಾಡಿ ಆರೋಗ್ಯ ಇಲಾಖಾ ವತಿಯಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಕೇಳಿಕೊಂಡರು.ಸಿಡಿಒ ರಶ್ಮಿ ಆಶೋಕ್ ಮಾತನಾಡಿ ಮಹಿಳಾ ಮತ್ತು ಮಕ್ಕಳ ಇಲಾಖೆಗೆ ಸಂಬಂಧಪಟ್ಟ ಮಾಹಿತಿ ನೀಡಿದರು.ಗ್ರಾಮ ವಾಸ್ತವ್ಯದಲ್ಲಿ ಹಾಜರಿದ್ದ ವಿವಿಧ ಇಲಾಖೆಯ ಕುರಿತು ಮಾಹಿತಿ ನೀಡಿದರು.
ತಾಲೂಕು ಪಂಚಾಯತ್ ಕಾರ್ಯನಿರ್ವಣಧಿಕಾರಿ ಭವಾನಿ ಶಂಕರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಗ್ರಾಮಸ್ಥರಿಗೆ ನಡೆಯುವ ಕಾರ್ಯಕ್ರಮವಾಗಿದ್ದು ಇದರ ಪ್ರಯೋಜನ ಜನರು ಪಡೆದುಕೊಳ್ಳಬೇಕು ಎಂದು ಹೇಳಿದರು.ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ವೀಣಾ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ವೇತಾ, ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಕಿಶೋರ್ ಕುಮಾರ್,ಗ್ರಾಮ ಪಂಚಾಯತ್ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Ad Widget . Ad Widget
Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .


ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಗ್ರಾಮಸ್ಥರಿಗೆ ಮಾಹಿತಿ ಕೊರತೆಯಾಗಿದೆ.ಗ್ರಾಮದ ಹೆಚ್ಚಿನ‌ ಜನರಿಗೆ ಗ್ರಾಮ ಸಭೆ ಫೆ.20 ರಂದು ನಡೆಯುತ್ತದೆ ಎಂದು ತಿಳಿದಿರಲಿಲ್ಲ. ಗ್ರಾಮ ವಾಸ್ತವ್ಯದ ಬಗ್ಗೆ ಜನರಿಗೆ ಯಾರು ಮಾಹಿತಿ ನೀಡಬೇಕಿತ್ತು.ನಮಗೆ ಮಾಹಿತಿ ಸಿಗಲಿಲ್ಲ.ಇದು ಕಾಟಚಾರಕ್ಕೆ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮವಾಗಿದೆ ಎಂದು ಗ್ರಾಮಸ್ಥರು ಮಾದ್ಯಮದವರೊಂದಿಗೆ ದೂರಿಕೊಂಡಿದ್ದಾರೆ.
ಕೆಲವೊಂದು ಇಲಾಖೆಯವರು ಗೈರು ಹಾಜರಾಗಿದ್ದರು. ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಗ್ರಾಮಮಸ್ತರು ವಿರಳ ಸಂಖ್ಯೆಯಲ್ಲಿ ಇದ್ದ ಕಾರಣ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಆರೋಗ್ಯ ಇಲಾಖೆ ವತಿಯಿಂದ ಬಿಪಿ ಮತ್ತು ಶುಗರ್ ತಪಾಸಣೆ ಮಾಡಿಸಿಕೊಂಡರು

Ad Widget 1 Ad Widget . Ad Widget . Ad Widget 1 Ad Widget . Ad Widget . Ad Widget . Ad Widget . Ad Widget . Ad Widget .1 Ad Widget .

Leave a Comment

Your email address will not be published. Required fields are marked *

error: Content is protected !!
Scroll to Top