ಮಂಡೆಕೋಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಅಧ್ಯಕ್ಷ ಸುರೇಶ್ ಕಣೆಮರಡ್ಕ ವಹಿಸಿ, ಶಾಲಾ ಮುಖ್ಯೋಪಾಧ್ಯಾಯಿನಿ ಮಂಜುಳಾ ಕಾರ್ಯಕ್ರಮ ಉದ್ಘಾಟಿಸಿದರು. ಹಾಸನ ವಲಯ ಮೀಸಲು ಪೊಲೀಸ್ ಪಡೆಯ ಅಧಿಕಾರಿ ದಿನೇಶ್ ಪರಿಸರ ಜಾಗೃತಿ ಬಗ್ಗೆ ಉಪನ್ಯಾಸ ನೀಡುದರು. ವೇಧಿಕೆಯಲ್ಲಿ ಅಜ್ಜಾವರ ವಲಯ ಮೇಲ್ವಿಚಾರಕಿವಿಶಾಲ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಕಾಶ್ ಕಣೆಮರಡ್ಕ ಉಪಸ್ಥಿತರಿದ್ದರು. ಈ ವೇಳೆ ಶಾಲಾ ಮಕ್ಕಳಿಗೆ ಪರಿಸರ ಜಾಗೃತಿಗೆ ಸಂಬಂಧಿಸಿದಂತೆ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಿಸಲಾಯಿತು. ಶಾಲಾ ಆವರಣಗಳಲ್ಲಿ ವಿವಿಧ ಗಿಡಗಳನ್ನು ನೆಡಲಾಯಿತು. ವಲಯ ಮೇಲ್ವಿಚಾರಕಿ ವಿಶಾಲ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಕಲ್ಲಡ್ಕ ಒಕ್ಕೂಟದ ಸೇವಾ ಪ್ರತಿನಿಧಿ ಸುನಿತಾ ವಂದಿಸಿದರು. ಸೇವಾಪ್ರತಿನಿಧಿ ವೇಧಾವತಿ ಕಾರ್ಯಕ್ರಮ ನಿರೂಪಿಸಿದರು.