ಸುಳ್ಯ ತಾಲೂಕಿನ ಉಬರಡ್ಕ ಗ್ರಾಮದ ಬೆಳ್ಳಂಪಾಡಿ ಗುಡ್ಡದಲ್ಲಿ ಕೋವಿಯಿಂದ ಗುಂಡು ಹೊಡೆದುಕೊಂಡು ಯುವಕನೋರ್ವ ಆತ್ಮ ಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಘಟನೆ ನಿನ್ನೆ ರಾತ್ರಿ ನಡೆದಿರುವುದಾಗಿ ವರದಿಯಾಗಿದೆ.
ಸಾವಿಗೀಡಾಗಿರುವ ಯುವಕ ಅರಂತೋಡು ಗ್ರಾಮದವನು ಎಂದು ತಿಳಿದುಬಂದಿದೆ.
ಸ್ಥಳಕ್ಕೆ ರಾತ್ರಿಯೇ ಪೋಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡು ಮಹಜರು ನಡೆಸಿರುವುದಾಗಿ ತಿಳಿದುಬಂದಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.