ಭೀಕರ ಬೈಕ್ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವು
ಉಪ್ಪಿನಂಗಡಿ ಪುತ್ತೂರು ರಸ್ತೆಯ ಕೆಮ್ಮಾಯಿ ಪೆಟ್ರೋಲ್ ಬಂಕ್ ಬಳಿ ನಡೆದ ಭೀಕರ ಬೈಕ್ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ನಡೆದಿದೆ.ಸೇಡಿಯಾಪು ಬಳಿಯ ನಿವಾಸಿ ಚೈತ್ರೇಶ್ ಯಾನೆ ಚರಣ್ ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದು ಅಪಘಾತ ಸಂಭವಿಸಿದೆ . ಸವಾರನ ತಲೆ ಮತ್ತು ಭಜಕ್ಕೆ ಗಂಭೀರ ಗಾಯವಾಗಿತ್ತು. ಸ್ಥಳಕ್ಕೆ ಸಂಚಾರ ಠಾಣೆಯ ಪೊಲೀಸರು ತೆರಳಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಭೀಕರ ಬೈಕ್ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವು Read More »