ಖಾಸಗಿ ಬಸ್‌ನಲ್ಲಿ ಬೆಂಕಿ: 26 ಮಂದಿ ಸಾವು

ಖಾಸಗಿ ಬಸ್‌ ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 26 ಮಂದಿ ಸಜೀವ ದಹನವಾಗಿರುವ ಘಟನೆ ಮುಂಬೈ-ನಾಗ್ಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಶನಿವಾರ ವರದಿಯಾಗಿದೆಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.33 ಜನರು ಪ್ರಯಾಣಿಸುತ್ತಿದ್ದ ಬಸ್‌ ಯವತ್ಮಾಲ್ ನಿಂದ ಪುಣೆಗೆ ತೆರಳುತ್ತಿದ್ದ ವೇಳೆ ಸಮೃದ್ಧಿ ಮಹಾಮಾರ್ಗ್ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್ಸಿನ ಟೈರ್ ಒಡೆದಿದೆ. ಆ ಬಳಿಕ ಬಸ್‌ ಪಲ್ಟಿಯಾಗಿ ಅದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬಸ್ಸಿನಲ್ಲಿದ್ದ 26 ಮಂದಿ ಸಜೀವ ದಹನವಾಗಿದ್ದಾರೆ ಎಂದು ವರದಿ ತಿಳಿಸಿದೆ.ಘಟನೆಯಲ್ಲಿ ಚಾಲಕ ಸುರಕ್ಷಿತವಾಗಿದ್ದಾರೆ. 6-8 ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಬುಲ್ಧಾನ ಎಸ್ಪಿ ಸುನೀಲ್ ಕಡಸನೆ ತಿಳಿಸಿದ್ದಾರೆ

Ad Widget . Ad Widget . Ad Widget . . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top