ಟಿಎಂಸಿ ಕಾರ್ಯಕರ್ತ ಗುಂಡಿಕ್ಕಿ ಹತ್ಯೆ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿರುವ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ
ನಡೆದಿದೆ.
ಜಿಯಾRXರುಲ್ ಮೊಲ್ಲಾ ಮೃತ ಕಾರ್ಯಕರ್ತ ಎಂದು ತಿಳಿದು ಬಂದಿದೆ. ಬಸಂತಿ ಗ್ರಾಮದ ರಸ್ತೆಯೊಂದರಲ್ಲಿ ಗುಂಡಿನ ಗಾಯದಿಂದ ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಗಂಭೀರ ಸ್ವರೂಪದ ಗಾಯದಿಂದ ಅವರು ಆದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.
ಜಿಯಾರುಲ್ ಮೊಲ್ಲಾ ಅವರು ಯುವ ತೃಣಮೂಲ ಕಾಂಗ್ರೆಸ್ ಸದಸ್ಯನಾಗಿದ್ದು, ಕಳೆದ ಕೆಲ ದಿನಗಳಿಂದ ನಿರಂತರವಾಗಿ ಅವರಿಗೆ ಬೆದರಿಕೆಗಳು ಬರುತ್ತಿದ್ದವು. ರಾಜಕೀಯ ವಿಚಾರಕ್ಕೆ ಸಂಬಂಧಿಸಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ.

Ad Widget . Ad Widget . Ad Widget . . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top