ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ : ಸೂಕ್ತ ಕ್ರಮಕ್ಕೆ ಒತ್ತಾಯ

ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೋಮು ಗಲಭೆ ಪ್ರಚೋದಿಸುವ ಪೋಸ್ಟ್ ಗಳನ್ನು ಹರಿಬಿಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿ ಆಗ್ರಹಿಸಿದ್ದಾರೆ.ಶನಿವಾರ ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಆಯುಕ್ತರಿಗೆ ದೂರು ನೀಡಿದ ಶಾಸಕರು, ‘ಸಾಮಾಜಿಕ ಜಾಲತಾಣಗಳಾದ ಇನ್‌ಸ್ಟಾಗ್ರಾಮ್ ಮತ್ತು ವಾಟ್ಸಾಪ್‌ಗಳಲ್ಲಿ ಮತೀಯ ಮನಸ್ಕ ಸಂಘಟನಾ ಗುಂಪುಗಳು ಹಿಂದೂಗಳ ನಂಬಿಕೆ ಮತ್ತು ಆಚರಣಾ ಪದ್ಧತಿಗಳ ವಿರುದ್ಧ, ಹಿಂದೂಗಳು ಆರಾಧಿಸುವ ದೈವ ದೇವರುಗಳನ್ನು ಅಪಹಾಸ್ಯದ ರೀತಿಯಲ್ಲಿ ಬಿಂಬಿಸಿ, ತುಚ್ಛವಾಗಿ ಬರವಣಿಗೆಗಳ ಮೂಲಕ ಎಡಿಟಿಂಗ್ ಮಾಡಿ ಪೋಸ್ಟ್ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿರುತ್ತದೆ.ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುತ್ತಿರುವ ಹಲವಾರು ಪೋಸ್ಟ್ ಗಳು, ವೀಡಿಯೋಗಳನ್ನು ನಿರ್ದಿಷ್ಟ ಗುಂಪೊಂದು ರಚಿಸಿ, ಹರಿ ಬಿಡುತ್ತಿರುವುದರಿಂದ ಸಮಾಜದ ಸ್ವಾಸ್ಥ್ಯ ಹಾಳುಗೆಡವಿ, ಕೋಮು ಗಲಭೆ ಸೃಷ್ಟಿಸುವ ಹುನ್ನಾರ ಸ್ಪಷ್ಟವಾಗಿ ಗೋಚರಿಸುತ್ತದೆ.ಸಾಮರಸ್ಯ ಸಹಬಾಳ್ವೆ ಮತ್ತು ಶಾಂತಿ ಸುವ್ಯವಸ್ಥೆ ತುಂಬಿರುವ ಜಿಲ್ಲೆಯಲ್ಲಿ ಈ ರೀತಿಯ ಅವಹೇಳನಕಾರಿ ಪೋಸ್ಟ್ ಮೂಲಕ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿರುವ ಪೇಜ್‌ಗಳ ಅಡ್ಮಿನ್ ಗಳ ವಿರುದ್ಧ ಕಾನೂನು ರೀತಿಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ.ಈ ಬಗ್ಗೆ ದಾಖಲೆಗಳನ್ನು ಅಧಿಕೃತ ದೂರವಾಣಿ ಸಂಖ್ಯೆಗೆ ಕಳುಹಿಸಿಕೊಡಲಾಗಿದ್ದು, ಈ ಬಗ್ಗೆ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Ad Widget . Ad Widget . Ad Widget . . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top