October 2023

ಅ.26ಕ್ಕೆ ಮಹಾತ್ಮ ಗಾಂಧಿ ಮಲ್ನಾಡ್ ಪ್ರೌಢಶಾಲೆಯ ಕ್ರೀಡಾಂಣದಲ್ಲಿ ಸುಳ್ಯ ತಾಲೂಕು ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕ್ರೀಡಾಕೂಟ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ಮತ್ತು ಸೈಂಟ್ ಜೋಸೆಫ್ ಆಂಗ್ಲಮಾಧ್ಯಮ ವಿದ್ಯಾಸಂಸ್ಥೆಗಳು ಸುಳ್ಯ ಹಾಗೂ ಸೈಂಟ್ ಬ್ರಿಜಿಡ್ಸ್ ಅನುದಾನಿತ ಹಿ.ಪ್ರಾ. ಶಾಲೆ ಸುಳ್ಯ ಸಹಯೋಗದಲ್ಲಿ ಅ.26 ಮತ್ತು 27ರಂದು ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕ್ರೀಡಾಕೂಟ ‘ಕ್ರೀಡಾ ವಿಕ್ರಮ – 2023’ ಸುಳ್ಯದ ಕೋಡಿಯಾಲಬೈಲು ಮಹಾತ್ಮಗಾಂಧಿ ಮಲ್ನಾಡ್ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಸೈಂಟ್ ಜೋಸೆಫ್ ಹಾಗೂ ಸೈಂಟ್ ಬ್ರಿಜಿಡ್ಸ್ ವಿದ್ಯಾಸಂಸ್ಥೆಗಳ ಸಂಚಾಲಕ […]

ಅ.26ಕ್ಕೆ ಮಹಾತ್ಮ ಗಾಂಧಿ ಮಲ್ನಾಡ್ ಪ್ರೌಢಶಾಲೆಯ ಕ್ರೀಡಾಂಣದಲ್ಲಿ ಸುಳ್ಯ ತಾಲೂಕು ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕ್ರೀಡಾಕೂಟ Read More »

ಕರ್ನಾಟಕ ರಾಜ್ಯೋತ್ಸವ ಉನ್ನತ ಪ್ರಶಸ್ತಿಗೆ ಖ್ಯಾತ ಕವಿ ಸುಬ್ರಾಯ ಚೊಕ್ಕಾಡಿ, ರಂಗ ಕಲಾವಿದೆ ಸರೋಜಿನಿ ಶೆಟ್ಟಿ ನಾಮ ನಿರ್ದೇಶನಕ್ಕೆ ಅಭಿಯಾನ

ಸುಳ್ಯ : ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಉನ್ನತ ಪ್ರಶಸ್ತಿಗೆ ಸುಳ್ಯದ ಖ್ಯಾತ ಕವಿ ಸುಬ್ರಾಯ ಚೊಕ್ಕಾಡಿ ಮತ್ತು ತುಳುನಾಡ ಸಿರಿ ಖ್ಯಾತಿಯ ಶ್ರೇಷ್ಠ ಅಭಿನೇತ್ರಿ ರಂಗ ಕಲಾವಿದೆ ಸರೋಜಿನಿ ಶೆಟ್ಟಿ ಅವರ ನಾಮ ನಿರ್ದೇಶನಕ್ಕೆ ಐಲೇಸಾ-ದಿವಾಯ್ಸ್ ಆಫ್ ಓಶನ್ ರಿ. ಸಂಸ್ಥೆ ಅಭಿಯಾನ ಕೈಗೊಂಡಿದೆ. ನಾಮ‌ನಿರ್ದೇಶನ ಪ್ರಕ್ರಿಯೆ ಅ.15ರಂದು ಕೊನೆಗೊಳ್ಳಲಿದ್ದು ಸಾಹಿತ್ಯ ಸಾಂಸ್ಕೃತಿಕ ಅಭಿಮಾನಿಗಳೆಲ್ಲರೂ ಈ ಇಬ್ಬರು ಅರ್ಹ ವ್ಯಕ್ತಿಗಳ ಆಯ್ಕೆಗಾಗಿ ಕರ್ನಾಟಕ ಸೇವಾ ಸಿಂಧು https://sevasindhu.karnataka.gov.inವೆಬ್ ಸೈಟಿನಲ್ಲಿ ಕ್ರಮವಾಗಿ ಸಾಹಿತ್ಯ ಮತ್ತು ಸಿನಿಮಾ, ರಂಗಭೂಮಿ

ಕರ್ನಾಟಕ ರಾಜ್ಯೋತ್ಸವ ಉನ್ನತ ಪ್ರಶಸ್ತಿಗೆ ಖ್ಯಾತ ಕವಿ ಸುಬ್ರಾಯ ಚೊಕ್ಕಾಡಿ, ರಂಗ ಕಲಾವಿದೆ ಸರೋಜಿನಿ ಶೆಟ್ಟಿ ನಾಮ ನಿರ್ದೇಶನಕ್ಕೆ ಅಭಿಯಾನ Read More »

ಉದ್ಯೋಗ ಕೊಡುವುದಾಗಿ ಹೇಳಿ ವಂಚನೆ

ಸುಳ್ಯ : ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಉದ್ಯೋಗ ಕೊಡುವುದಾಗಿ ಹೇಳಿ ಅಮರಪಡ್ನೂರಿನ ನಿವಾಸಿಯೋರ್ವರಿಗೆ ವಂಚಿಸಿದ್ದು ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಅಮರಪಡ್ನೂರು ಗ್ರಾಮದ ನಿವಾಸಿ ಯಶ್ವಿನಿ ಕೆ ಬಿ ಎಂಬವರ ದೂರಿನಂತೆ ಇವರಿಗೆ ಜು.15, 2023 ರಂದು ಅಪರಿಚಿತ ವ್ಯಕ್ತಿಯಬ್ಬರು ಕರೆಮಾಡಿ ತಾನು Vistara Airlines , Singapore Branch, Devanahalli Bangalore ಎಂಬ ಸಂಸ್ಥೆಯಿಂದ ಕರೆಮಾಡುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಖಾಲಿಯಿದ್ದು, ಈ ಉದ್ಯೋಗದಲ್ಲಿ ಹೆಚ್ಚಿನ ಸಂಬಳ ಹಾಗೂ ಇನ್ನಿತರ ಸೌಲಭ್ಯಗಳು ನೀಡುವುದಾಗಿ ತಿಳಿಸಿರುತ್ತಾರೆ.

ಉದ್ಯೋಗ ಕೊಡುವುದಾಗಿ ಹೇಳಿ ವಂಚನೆ Read More »

ಮೊಬೈಲ್ ವಿಪತ್ತಿನ ಸಿಗ್ನಲ್: ಉಪನ್ಯಾಸಕರಿಗೆ ಸಿಕ್ಕಿ ಬಿದ್ದ ವಿದ್ಯಾರ್ಥಿಗಳು

ಪುತ್ತೂರು : ವಿಪತ್ತು ಸಂದರ್ಭದಲ್ಲಿ ಮೊಬೈಲ್ ಮೂಲಕ ಎಚ್ಚರಿಕೆ ಸಂದೇಶವನ್ನು ನೀಡುವ ಬಗ್ಗೆ ಪ್ರಾಯೋಗಿಕ ಪರೀಕ್ಷೆ ಅ.11ರಂದು ದೇಶಾದ್ಯಂತ ನಡೆದಿದೆ. ಆದರೆ ಇದು ಪುತ್ತೂರಿನ ಕಾಲೇಜೊಂದರ ಹಲವು ವಿದ್ಯಾರ್ಥಿಗಳ ಪಾಲಿಗೆ ಮಾತ್ರ ಆಪತ್ತಾಗಿ ಪರಿಣಮಿಸಿತು.ತರಗತಿಯೊಳಗೆ ಮೊಬೈಲ್ ಕೊಂಡೊಯ್ಯಲು ಕಾಲೇಜಿನಲ್ಲಿ ಅನುಮತಿ ಇಲ್ಲ.ಆದರೂ ಎಷ್ಟೋ ವಿದ್ಯಾರ್ಥಿಗಳು ಸೈಲೆಂಟ್ ಮೋಡ್‌ನಲ್ಲಿ ಇರಿಸಿ ಉಪನ್ಯಾಸಕರ ಗಮನಕ್ಕೆ ಬಾರದಂತೆ ಮೊಬೈಲ್ ಕೊಂಡೊಯ್ಯುತ್ತಿದ್ದರು. ಸೆ. 11.45ರ ಸುಮಾರಿಗೆ ಧ್ವನಿ ಮತ್ತು ಕಂಪನದೊಂದಿಗೆ ಮೊಬೈಲ್‌ಗಳಿಗೆ ಎಚ್ಚರಿಕೆ ಸಂದೇಶ ಬರಲಾರಂಭಿಸಿದ್ದು, ಸೈಲೆಂಟ್ ಮೋಡ್‌ನಲ್ಲಿರುವ ಮೊಬೈಲ್‌ ಗಳೂ ಸದ್ದು

ಮೊಬೈಲ್ ವಿಪತ್ತಿನ ಸಿಗ್ನಲ್: ಉಪನ್ಯಾಸಕರಿಗೆ ಸಿಕ್ಕಿ ಬಿದ್ದ ವಿದ್ಯಾರ್ಥಿಗಳು Read More »

ಅರಂತೋಡು : ಗಾಳಿಮಳೆ ಅಪಾರ ಹಾನಿ

ಸುಳ್ಯ ತಾಲೂಕಿನ ವಿವಿಧೆಡೆ ಬುಧವಾರ ರಾತ್ರಿ ಭಾರೀ ಗಾಳಿ ಮಳೆ ಸುರಿದ ಹಿನ್ನಲೆಯಲ್ಲಿ ಅಪಾರವಾಗಿ ಹಾನಿ ಉಂಟಾದ ಘಟನೆ ವರದಿಯಾಗಿದೆ. ಗಾಳಿ ಮಳೆಗೆ ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಬಳಿಯಿದ್ದ ತೆಂಗಿನಮರವೊಂದು ಶಾಲಾ ಕಟ್ಟಡದ ಮೇಲೆ ಬಿದ್ದ ಪರಿಣಾಮವಾಗಿ ಶಾಲಾ ಕಟ್ಟಡ ಹಾಗೂ ಹಂಚುಗಳಿಗೆ ಹಾನಿಯಾಗಿದೆ.ಅಲ್ಲದೆ ವಿದ್ಯುತ್ ಲೈನಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.ಇದಲ್ಲದೆ ಇತರೆಡೆ ಹಾನಿ ಉಂಟಾದ ಬಗ್ಗೆ ವರದಿಯಾಗುತ್ತಿದೆ.

ಅರಂತೋಡು : ಗಾಳಿಮಳೆ ಅಪಾರ ಹಾನಿ Read More »

ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಮೃತ ಯುವಕನನ್ನು ಪುತ್ತೂರು ತಾಲೂಕಿನ ಕುರಿಯ ಪಡ್ಪು ನಿವಾಸಿ, ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ.ದೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಮೃತರು ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ Read More »

ಚಲಿಸುತ್ತಿದ್ದ ಬಸ್ಸು ಹತ್ತಲು ಯತ್ನಿಸಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

ಸುಳ್ಯ: ಚಲಿಸುತ್ತಿದ್ದ ಬಸ್ಸು ಹತ್ತಲು ಯತ್ನಿಸಿದ ವ್ಯಕ್ತಿಯೊಬ್ಬರು ರಸ್ತೆಗೆ ಎಸೆಯಲ್ಪಟ್ಡು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟ ವ್ಯಕ್ತಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ‌. ಆಲೆಟ್ಟಿ ಗ್ರಾಮದ ಕೂಳಿಯಡ್ಕ ಕರುಣಾಕರ ಮೃತಪಟ್ಟ ದುರ್ದೈವಿ. ಸುಳ್ಯ ಆಲೆಟ್ಟಿ ಕ್ರಾಸ್ ಬಳಿಯಲ್ಲಿ ಶನಿವಾರ ಸಂಜೆ ಖಾಸಗಿ ಬಸ್ಸು ಹತ್ತಲು ಅವರು ಹೋದಾಗ ಬಸ್ಸಿನ ಬಾಗಿಲು ತಳ್ಳಲ್ಪಟ್ಟು ರಸ್ತೆಗೆ ಆಯತಪ್ಪಿ ಬಿದ್ದರೆನ್ನಲಾಗಿದೆ. ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿದರು.ಮನೆಯಲ್ಲೆ ಮುಂಜಾನೆ ಸಮಸ್ಯೆ ಉಲ್ಬಣವಾದ ಹಿನ್ನಲೆಯಲ್ಲಿ ಅವರನ್ನು ಚಿಕಿತ್ಸೆಗಾಗಿ

ಚಲಿಸುತ್ತಿದ್ದ ಬಸ್ಸು ಹತ್ತಲು ಯತ್ನಿಸಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು Read More »

ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿಗೆ ಅಕ್ರಮ ಪ್ರವೇಶ:ಪ್ರಕರಣ ದಾಖಲು‌

ಸುಳ್ಯ : ಸುಳ್ಯದ ಕುರುಂಜಿಭಾಗ್‌ನಲ್ಲಿರುವ ಪಾಲಿಟೆಕ್ನಿಕ್‌‌ ಕಾಲೇಜಿಗೆ ತಂಡವೊಂದು ಅಕ್ರಮ ಪ್ರವೇಶ ಮಾಡಿ ಅಲ್ಲಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿಯವರನ್ನು ಬೆದರಿಸಿರುವುದಾಗಿ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಕಾಂತಮಂಗಲ ನಿವಾಸಿ ಡಾ.ಜ್ಯೋತಿ ಆರ್‌‌ ಪ್ರಸಾದ್‌‌ (52) ಎಂಬವರು ನೀಡಿದ ದೂರಿನಂತೆ ಐಪಿಸಿ ಕಲಂ 448, 506 ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿದೆ. ದೂರುದಾರರ ಬಾವ ಡಾ.ಚಿದಾನಂದ, ಅವರ ಹೆಂಡತಿ ಶೋಭ ಚಿದಾನಂದ, ಮಗ ಅಕ್ಷಯ್‌‌ ಕೆ ಸಿ, ಮಗಳು ಡಾ.ಐಶ್ವರ್ಯ, ಸಂಬಂದಿ ಹೇಮನಾಥ

ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿಗೆ ಅಕ್ರಮ ಪ್ರವೇಶ:ಪ್ರಕರಣ ದಾಖಲು‌ Read More »

ಅಂಗಡಿಗೆ ನುಗ್ಗಿ ಅಂಗಡಿ ಮಾಲೀಕನಿಗೆ ಹಲ್ಲೆ

ಅಂಗಡಿಗೆ ನುಗ್ಗಿ ಅಂಗಡಿ ಮಾಲೀಕನಿಗೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಪೆರಿಯಡ್ಕ ಎಂಬಲ್ಲಿ ನಡೆದಿದೆ.ಉಪ್ಪಿನಂಗಡಿ ಗ್ರಾಮ ಪುತ್ತೂರು ನಿವಾಸಿ ಬಿ.ಕೆ ಅಬ್ದುಲ್ ರಹೀಮಾನ್ ಎಂಬವರು ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಪೆರಿಯಡ್ಕ ಎಂಬಲ್ಲಿ ಕೆ.ಜಿ.ಎನ್ ಜನರಲ್ ಸ್ಟೋರ್ ಹೊಂದಿದ್ದು, ವ್ಯಾಪಾರ ಮಾಡಿಕೊಂಡಿದ್ದಾಗ, ಪರಿಚಯ ಇರುವ ಆರೋಪಿ ಜಕಾರಿಯ ಎಂಬುವರು ಏಕಾಏಕಿಯಾಗಿ ಅಂಗಡಿ ಒಳಗಡೆ ಅಕ್ರಮ ಪ್ರವೇಶ ಮಾಡಿ ಹಲ್ಲೆ ನಡೆಸಿದ್ದು, ಈ ವೇಳೆ ಇತರ ಆರೊಪಿಗಳಾದ ಹಮೀದ್, ರಫಿಕ್,

ಅಂಗಡಿಗೆ ನುಗ್ಗಿ ಅಂಗಡಿ ಮಾಲೀಕನಿಗೆ ಹಲ್ಲೆ Read More »

ಪ್ರವೀಣ್ ನೆಟ್ಟಾರು ಹತ್ಯೆ : ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಪ್ರಕರಣದ ಮೂವರು ಆರೋಪಿಗಳ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.ಸುಳ್ಯ ತಾಲೂಕಿನ ಬೆಳ್ಳಾರೆಯ ನೆಟ್ಟಾರು ನಿವಾಸಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು ಆತನ ಕೋಳಿ ಅಂಗಡಿ ಬಳಿಯೇ ಕಳೆದ ವರ್ಷ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟಿಗೆ ಮೂವರು ಆರೋಪಿಗಳು ಜಾಮೀನು ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ

ಪ್ರವೀಣ್ ನೆಟ್ಟಾರು ಹತ್ಯೆ : ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್ Read More »

error: Content is protected !!
Scroll to Top