ಪ್ರವೀಣ್ ನೆಟ್ಟಾರು ಹತ್ಯೆ : ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಪ್ರಕರಣದ ಮೂವರು ಆರೋಪಿಗಳ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.ಸುಳ್ಯ ತಾಲೂಕಿನ ಬೆಳ್ಳಾರೆಯ ನೆಟ್ಟಾರು ನಿವಾಸಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು ಆತನ ಕೋಳಿ ಅಂಗಡಿ ಬಳಿಯೇ ಕಳೆದ ವರ್ಷ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟಿಗೆ ಮೂವರು ಆರೋಪಿಗಳು ಜಾಮೀನು ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಚ್.ಬಿ. ಪ್ರಭಾಕರ್ ಶಾಸ್ತ್ರಿ ನ್ಯಾ ಅನಿಲ್ ಕೆ.ಕಟ್ಟಿ ಅವರಿದ್ದ ವಿಭಾಗೀಯ ಪೀಠವು, ಆತನ ಹತ್ಯೆ ಸಂಬಂಧ ಸಂಚಿನಲ್ಲಿ ಆರೋಪಿಗಳು ಭಾಗಿಯಾದ ಆರೋಪವಿದೆ ಹೀಗಾಗಿ ಕೆ.ಇಸ್ಮಾಯಿಲ್ ಶಫಿ, (ಆರೋಪಿ 9), ಕೆ.ಮೊಹಮ್ಮದ್ ಇಕ್ವಾಲ್ (ಆರೋಪಿ 10) ಹಾಗೂ ಎಂ.ಶಾಹೀದ್ (ಆರೋಪಿ 11) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು‌ ವಜಾಗೊಳಿಸಿದೆ ಎಂದು ತಿಳಿದು ಬಂದಿದೆ.

Ad Widget . Ad Widget . Ad Widget . . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top