ಸಂಪಾಜೆಯ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಗೇಟಿಗೆ ಢಿಕ್ಕಿ ಲಾರಿಯೊಂದು ಡಿಕ್ಕಿ ಹೊಡೆದು ಜಖಂಗೊಂಡ ಘಟನೆ ನ.7ರಂದು ಬೆಳಗ್ಗಿನ ಜಾವ ಸಂಭವಿಸಿದೆ.
ಮಡಿಕೇರಿಯಿಂದ ಮಂಗಳೂರಿಗೆ ತೆರಳುತ್ತಿದ್ದ ತಮಿಳುನಾಡು ಮೂಲದ ಲಾರಿಯೊಂದು ಬ್ರೇಕ್ ವೈಫಲ್ಯಗೊಂಡ ಪರಿಣಾಮವಾಗಿ ಚಾಲಕನ ನಿಯಂತ್ರಣ ತಪ್ಪಿ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಗೇಟಿಗೆ ಢಿಕ್ಕಿಯಾಗಿದ್ದು, ಗೇಟು ಹಾಗೂ ಲಾರಿಯ ಮುಂಭಾಗ ಜಖಂಗೊಂಡಿರುವುದಾಗಿ ತಿಳಿದುಬಂದಿದೆ. ಲಾರಿಯ ಬ್ರೇಕ್ ವೈಫಲ್ಯವೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.