ಪುತ್ತೂರು ನಗರದ ಕಲ್ಲೆಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಕಳೆದ ತಡ ರಾತ್ರಿ ಬರ್ಬರವಾಗಿ ಕಡಿದು ಹತ್ಯೆ ಮಾಡಲಾಗದ ಘಟನೆ ವರದಿಯಾಗಿದೆ. ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ಸಹಿತ ಪೊಲೀಸರು ಭೇಟಿ ನೀಡಿದ್ದು, ಬಂದೋಬಸ್ತ್ ಏರ್ಪಡಿಸಲಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಭೇಟಿ ನೀಡಿ ಮಹಜರು ನಡೆಸುತ್ತಿದ್ದಾರೆ. ಮೃತ ದೇಹವನ್ನು ದೇರಳಕಟ್ಟೆ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ. ಬಸ್ ಚಾಲಕರಾಗಿದ್ದ ಬನ್ನೂರು ನಿವಾಸಿ ಚೇತನ್ ಮತ್ತು ದಾರದಕುಕ್ಕು ನಿವಾಸಿ ಪಡೀಲ್ ನಲ್ಲಿ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ವ್ಯವಹಾರ ನಡೆಸುತ್ತಿರುವ ಮನೀಶ್ ಎಂಬವರು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ. ಆದರೆ ಆರೋಪಿಗಳು ಠಾಣೆಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ.