ಜ.12ಕ್ಕೆ ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆ

ಸುಳ್ಯ: ಸುಳ್ಯ ತಾಲೂಕಿನ ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಜ.12,13,14 ರಂದು ನಡೆಯಲಿದೆ. 3 ದಿನಗಳ ಕಾಲ ನಡೆಯುವ ಸುವರ್ಣ ಮಹೋತ್ಸವಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಚೊಕ್ಕಾಡಿ ಎಜ್ಯುಕೇಶನ್‌ ಸೊಸೈಟಿಯ ಅಧ್ಯಕ್ಷರು ಹಾಗೂ ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಮಾಜಿ ಸಚಿವ ಎಸ್.ಅಂಗಾರ ಹೇಳಿದ್ದಾರೆ.ಅವರು ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸುವರ್ಣ ಮಹೋತ್ಸವದ ಹಿನ್ನಲೆಯಲ್ಲಿ ಶಾಲೆಯ ಸಂಪೂರ್ಣ ಅಭಿವೃದ್ಧಿಗೆ ರೂಪುರೇಷೆ ತಯಾರಿಸಲಾಗಿದೆ. ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗಿದೆ. ಶಾಲಾ ಕಟ್ಟಡವನ್ನು ನವೀಕರಿಸಲಾಗಿದೆ. ಶಾಲಾ ಪ್ರಯೋಗಾಲಯ, ಸ್ಮಾರ್ಟ್ ಕ್ಲಾಸ್ ನಿರ್ಮಾಣ ಮಾಡಲಾಗಿದೆ. ಕ್ರೀಡಾಂಗಣ, ಗ್ರಂಥಾಲಯ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.
ಜ.12ರಂದು ಸಂಜೆ 5ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಚೊಕ್ಕಾಡಿ ಎಜ್ಯುಕೇಶನ್‌ ಸೊಸೈಟಿಯ ಅಧ್ಯಕ್ಷ ಎಸ್.ಅಂಗಾರ ಅಧ್ಯಕ್ಷತೆ ವಹಿಸಲಿದ್ದಾರೆ. ಖ್ಯಾತ ಕವಿ ಸುಬ್ರಾಯ ಚೊಕ್ಕಾಡಿ ಆಶಯ ಭಾಷಣ ಮಾಡುವರು. ‘ಸುವರ್ಣ ಜ್ಯೋತಿ’ ಸ್ಮರಣ ಸಂಚಿಕೆಯನ್ನು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಬಿಟುಗಡೆ ಮಾಡುವರು. ವಿಧಾನ ಪರಿಷತ್‌ ಸದಸ್ಯ ಬಿ.ಎಂ.ಫಾರೂಕ್ ಬಹುಮಾನ ವಿತರಿಸಲಿದ್ದಾರೆ. ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಯನ್ನು ಜಿಲ್ಲಾಧಿಕಾರಿ ಮುಲೈಮುಗಿಲನ್ ಎಂ.ಪಿ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ದಯಾನಂದ ರಾಮಚಂದ್ರ ನಾಯಕ್, ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ. ಇ ಅತಿಥಿಗಳಾಗಿ ಭಾಗವಹಿಸುವರು. ಕಿವಾನಿ ಇಂಟರ್‌ನ್ಯಾಷನಲ್ ಗ್ರೂಪ್‌ನ ಬಿ.ಸತ್ಯಮೂರ್ತಿ ಪ್ರಯೋಗಾಲಯ ಉದ್ಘಾಟನೆ ಮಾಡಲಿದ್ದಾರೆ. ದಾನಿಗಳ ನಾಮ ಫಲಕವನ್ನು ಜಿಂದಾಲ್ ಅಲ್ಯೂಮಿನಿಯಂ ಕಂಪೆನಿಯ ಪ್ರಧಾನ ವ್ಯವಸ್ಥಾಪಕರು, ಕಾನೂನು ಮತ್ತು ವ್ಯವಹಾರ ಸಲಹೆಗಾರರಾದ ನಾಗೇಂದ್ರ ಭಟ್ ಅನಾವರಣ ಮಾಡುವರು. ಗೌರವ ಉಪಸ್ಥಿತರಿತರಾಗಿ ಚೊಕ್ಕಾಡಿ ಎಜ್ಯುಕೇಶನ್‌ ಸೊಸೈಟಿಯ ಮಾಜಿ ಅಧ್ಯಕ್ಷ ನಳಿನ್‌ಕುಮಾ‌ರ್ ಕೋಡ್ಲುಗುಳಿ, ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಪ್ರಸಾದ್ ಮಾಡಬಾಕಿಲು, ದಿವಾಕರ ಪೈಲೂರು ಉಪಸ್ಥಿತರಿತರಿರುವರು. ಸಂಜೆ 3.30ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.3.30ರಿಂದ 4.30ರ ತನಕ ಅಂಗನವಾಡಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಿದೆ. 4.30ರಿಂದ 5ರ ತನಕ ಚೊಕ್ಕಾಡಿ ಆಂಗ್ಲಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, 9 ರಿಂದ ಮಾತನಾಡುವ ಚಿಂಟು’ 9.30ರಿಂದ ಕಿರು ಪ್ರಹಸನ ರಾತ್ರಿ 10 ರಿಂದ ಐಸಿರಿ ಕಲಾವಿದೆರ್ ಮಂಜೇಶ್ವರ ಅಭಿನಯಿಸುವ ‘ಕಲಿಗೆದ ಮಾಯಾರೆ ಪಂಜುರ್ಲಿ’ ತುಳು ಪೌರಾಣಿಕ ಮತ್ತು ಸಾಮಾಜಿಕ ನಾಟಕ ನಡೆಯಲಿದೆ.
ಜ.13ರಂದು ಅ.2.30ರಿಂದ 3.30 ರವರೆಗೆ ಶೈಕ್ಷಣಿಕ ವಿಚಾರಗೋಷ್ಠಿ ನಡೆಯಲಿದೆ. “ಶೈಕ್ಷಣಿಕ ಸವಾಲುಗಳು” ಗೋಷ್ಠಿ ನಡೆಯಲಿದ್ದು, ಬೆಳಾಲು ಶ್ರೀ ಮಂಜುನಾಥೇಶ್ವರ ಪ್ರೌಢಶಾಲೆಯ ಮುಖ್ಯೋಪಾದ್ಯಾಯ ರಾಮಕೃಷ್ಣ ಚೂಂತಾರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಹಶಿಕ್ಷಕ ಅರವಿಂದ ಚೊಕ್ಕಾಡಿ ಪ್ರಬಂಧ ಮಂಡಿಸಲಿದ್ದಾರೆ. ಸಂಜೆ 5.30 ಸಭಾ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಸಚಿವ, ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಎಸ್.ಅಂಗಾರ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್‌, ವಿಧಾನ ಪರಿಷತ್‌ ಸದಸ್ಯರಾದ ಪ್ರತಾಪ ಸಿಂಹ ನಾಯಕ್ ಕೆ., ಮಂಜುನಾಥ್ ಭಂಡಾರಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್, ಸುಳ್ಯ ತಹಶೀಲ್ದಾ‌ರ್ ಮಂಜುನಾಥ್‌, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ನ್ಯಾಯವಾದಿ ಬಾಲಸುಬ್ರಹ್ಮಣ್ಯ ಕಂಜರ್ಪಣೆ, ಎಲೆಕ್ನಿಕ್ ವಿ.ಲ್ಯಾಬ್ ಕಾಂ ಸ್ಥಾಪಕರಾದ ಎ.ಜಿ. ವೆಂಕಟ್ರಮಣ, ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಉದಯಕುಮಾರ್ ಬೆಟ್ಟ, ಅಮರಮುಳ್ಳೂರು ಗ್ರಾ.ಪಂ. ಸದಸ್ಯ ವೆಂಕಟ್ರಮಣ ಇಟ್ಟಿಗುಂಡಿ ಉಪಸ್ಥಿತರಿರಲಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಅ. 3.30ರಿಂದ 4ರ ವರೆಗೆ ಅಂಗನವಾಡಿ ಕುಕ್ಕುಜಡ್ಕ ಹಾಗೂ ಶೇಣಿ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ವೈಭವ, ಸಂಜೆ 4ರಿಂದ 5 ಹಾಗೂ 7ರಿಂದ 8.30 ರವರೆಗೆ ಚೊಕ್ಕಾಡಿ ಪ್ರೌಢಶಾಲಾ ಮತ್ತು ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ವೈಭವ ನಡೆಯಲಿದೆ.
ಜ.14 ರಂದು ಬೆಳಿಗ್ಗೆ 9.30ರಿಂದ ಹಿರಿಯ ವಿದ್ಯಾರ್ಥಿಗಳ ಪುನರ್ಮಿಲನ ‘ಆವರ್ತನ 2024 ಕಾರ್ಯಕ್ರಮ ನಡೆಯಲಿದೆ. ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬ ಕಾರ್ಯಕ್ರಮ ಉದ್ಘಾಟಿಸುವರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ತೇಜಸ್ವಿ ಕಡಪಳ ಅಧ್ಯಕ್ಷತೆ ವಹಿಸುವರು. ಅಂತಾರಾಷ್ಟ್ರೀಯ ವ್ಯಕ್ತಿತ್ವ ವಿಕಸನ ತರಬೇತುದಾರ ರಾಜೇಂದ್ರ ಭಟ್ ಕಾರ್ಕಳ ಮುಖ್ಯ ಭಾಷಣ ಮಾಡಲಿದ್ದಾರೆ. ಸಂಜೆ 5 ರಿಂದ ಸಮಾರೋಪ ಸಮಾರಂಭ ನಡೆಯಲಿದ್ದು, ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸುವರು.ಮಾಜಿ
ಸಚಿವ ಎಸ್.ಅಂಗಾರ, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಎಸ್.ಎಲ್.ಭೋಜೇಗೌಡ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ ವೃತ್ತ ನಿರೀಕ್ಷಕ ಮೋಹನ್ ಕೊಠಾರಿ, ಸುಳ್ಯ ಸಿ.ಡಿ.ಪಿ.ಒ. ಶೈಲಜಾ ಕುಕ್ಕುಜಡ್ಕ, ನಿವೃತ್ತ ಜನರಲ್ ಮ್ಯಾನೇಜರ್ ಸಾಫ್ಟ್‌ವೇ‌ರ್ ಸ್ಕ್ಯಾನ್ ರೇ ಟೆಕ್ನಾಲಜಿ ತಿರುಮಲೇಶ್ವರ ಎಚ್. ಚೊಕ್ಕಾಡಿ ಪ್ರಾಥಮಿಕ ಕೃಷಿಪತ್ತನ ಸಹಕಾರಿ ಸಂಘದ ಅಧ್ಯಕ್ಷ ಕೇಶವ ಕರ್ಮಾಜೆ, ಗ್ರಾ.ಪಂ. ಸದಸ್ಯೆ ದಿವ್ಯಾ ಮಡಪ್ಪಾಡಿ ಉಪಸ್ಥಿತರಿರುವರು. ನಿವೃತ್ತ ಶಿಕ್ಷಕರಿಗೆ ಮತ್ತು ಗೌರವ ಶಿಕ್ಷಕರಿಗೆ ಗುರುವಂದನಾ ಕಾರ್ಯಕ್ರಮ, ಕ್ರೀಡಾಪಟುಗಳಿಗೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದವರಿಗೆ ಅಭಿನಂದನೆ, ಸುವರ್ಣ ಮಹೋತ್ಸವ ಅಭಿವೃದ್ಧಿ ಕಾರ್ಯ ನಿರ್ವಹಿಸಿದವರಿಗೆ ಸನ್ಮಾನ ನಡೆಯಲಿದೆ.
ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ 3.30ರಿಂದ ಚಿಲಿಪಿಲಿ ಕಲರವ, 4ರಿಂದ ನೃತ್ಯ ಪ್ರದರ್ಶನ, 7.30ರಿಂದ ಕಿರುನಾಟಕ ಮತ್ತು ನೃತ್ಯ ಪ್ರದರ್ಶನ, 8.30ರಿಂದ ಯಕ್ಷಗಾನ ಬಯಲಾಟ, 10ರಿಂದ ಕುದ್ರೋಳಿ ಗಣೇಶ್ ಬಳಗದವರಿಂದ ವಿಸ್ಮಯ ಜಾದೂ ಪ್ರದರ್ಶನ ನಡೆಯಲಿದೆ ಎಂದು ಎಸ್.ಅಂಗಾರ ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಸಂಚಾಲಕರು ಹಾಗೂ ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ರಾಧಾಕೃಷ್ಣ ಬೊಳ್ಳೂರು, ಶಾಲಾ ಮುಖ್ಯೋಪಾಧ್ಯಾಯ ಸಂಕೀರ್ಣ ಚೊಕ್ಕಾಡಿ ಇತರರು ಉಪಸ್ಥಿತರಿದ್ದರು.

Ad Widget . Ad Widget . Ad Widget . . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top