ಅರಂತೋಡು : ತ್ರೋಬಾಲ್ ಪಂದ್ಯಾಟ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಸರ್ಕಾರಿ ಮಾದರಿ ಏರಿಯಾ ಪ್ರಾಥಮಿಕ ಶಾಲೆ ಅರಂತೋಡು ಇದರ ಜಂಟಿ ಆಶ್ರಯದಲ್ಲಿ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ ಅರುಂತೋಡು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಸುರೇಶ್ ಯು ಕೆ ಉಳುವಾರು ವಹಿಸಿದರು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಅರಂತೋಡು ತೋಡಿಕಾನ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ನೆರವೇರಿಸಿದರು. ಪ್ರಾಥಮಿಕ ಮಾತನ್ನು ಮಾತನ್ನು ಪ್ರಾಸ್ತಾವಿಕವಾಗಿ ಮಾತನಾಡಿದ ದೈಹಿಕ ಶಿಕ್ಷಣ ಪರಿವೀಕ್ಷಕ ಅಧಿಕಾರಿ ಆಶಾ ನಾಯಕ್ ಮಾತನಾಡಿದರು. ವೇದಿಕೆಯಲ್ಲಿ ಅರಂತೋಡು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಮಾಲಿನಿ ವಿನೋದ್ ಉಳುವಾರು ,ಪುಷ್ಪಾದರ ಕೊಡಂಕೆರಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ನಾಯಕ್, ದೈಹಿಕ ಶಿಕ್ಷಕಿ ಸರಸ್ವತಿ ,ನಿವೃತ್ತ ಶಿಕ್ಷಕ ತೀರ್ಥರಾಮ ,ಹೊನ್ನಪ್ಪ ಆಡ್ತಲೇ ,ಶಿಕ್ಷಣ ಸಂಯೋ ಜಕರು ಸಂಧ್ಯಾ, ದೈಹಿಕ ಶಿಕ್ಷಕ ಧನಂಜಯ ಸೇರಿದಂತೆ ಮುಂತಾದವರು ಉಪಸ್ಥಿರಿದ್ದರು.ಶಿಕ್ಷಕಿ ಭಾನುಮತಿ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕ ಗೋಪಾಲಕೃಷ್ಣ ಬನ ಸ್ವಾಗತಿಸಿ ರಮ್ಯ ವಂದನಾರ್ಪಣೆ ಗೈದರು.



































































































Leave a Comment

Your email address will not be published. Required fields are marked *

error: Content is protected !!
Scroll to Top