ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೀರಮಂಗಲ ನಿವಾಸಿ ಉಪನ್ಯಾಸಕ ಡಾ.ಅಚ್ಚುತ ಪೂಜಾರಿಯವರ ಪತ್ನಿ ಉಪನ್ಯಾಸಕಿ ಸುನಂದ ಅಚ್ಚುತ ಪೂಜಾರಿಯವರು ಬುಧವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಕಳೆದ ಶುಕ್ರವಾರ ತಮ್ಮ ಕುಟುಂಬದ ತರವಾಡು ಮನೆ, ಈಶ್ವರಮಂಗಲದ ಮೇನಾಲಕ್ಕೆ ನಿಕಟ ಸಂಬಂಧಿಕರೊಬ್ಬರ ಬೈಕಲ್ಲಿ ಹೋಗುತ್ತಿರುವಾಗ ಮಳೆ ಬಂದ ಕಾರಣಕ್ಕಾಗಿ ಕೊಡೆ ಬಿಡಿಸಿದರೆಂದೂ, ಗಾಳಿಗೆ ಕೊಡೆ ಎಳೆಯಲ್ಪಟ್ಟು ಇವರು ಬೈಕಿಂದ ಜಾರಿ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರೆಂದೂ ತಿಳಿದುಬಂದಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಉಪನ್ಯಾಸಕಿ ಸಾವು
