ವಿದ್ಯಾರ್ಥಿಗಳು ಪ್ರಬುದ್ದತೆಯನ್ನು ಬೆಳೆಸಿಕೊಳ್ಳಿ. ಡಾ.ಸುಂದರ ಕೇನಾಜೆ

ನಾವು ಯುವ ವಿದ್ಯಾರ್ಥಿಗಳ ಜೊತೆ ಒಂದಷ್ಟು ಸಮಾಲೋಚಿಸಬೇಕಾದ ಅನಿವಾರ್ಯ ಕಾಲಘಟ್ಟದಲ್ಲಿದ್ದೇವೆ. ಈ ದೇಶದ ಭವಿಷ್ಯ ಯುವಕರ ಕೈಯಲ್ಲಿದೆ. ವಿದ್ಯಾರ್ಥಿ ಸಂಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಯ ತರಬೇತಿಯಾಗಿ ಬದಲಾಗಲಿ. ಮುಂದಿನ ದಿನಗಳಲ್ಲಿ ಶಾಸಕಾಂಗದ ಚುಕ್ಕಾಣಿಯನ್ನು ಹಿಡಿಯಲು ಪ್ರೇರಣೆಯಾಗಲಿ. ಜೊತೆಗೆ ವಿದ್ಯಾರ್ಥಿಗಳು ಪ್ರಬುದ್ಧತೆಯನ್ನು ಬೆಳೆಸಿಕೊಳ್ಳಿ ಎಂದು ಜಾನಪದ ಲೇಖಕರು ಹಾಗೂ ಸಂಶೋಧಕರಾದ ಡಾ. ಸುಂದರ ಕೇನಾಜೆ ಹೇಳಿದರು. ಇವರು ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆ.12ನೇ ಗುರುವಾರದಂದು ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಸಭೆಯಲ್ಲಿ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಸ್ಪೂರ್ತಿದಾಯಕ ಮಾತುಗಳನ್ನಾಡಿ ಕಾಲೇಜಿನ ಸಮಗ್ರ ಅಭಿವೃದ್ಧಿಯನ್ನು ಬೆಳೆಸುವಲ್ಲಿ ವಿದ್ಯಾರ್ಥಿ ಸಂಘ ಬಹಳ ಮುಖ್ಯ ಮುಂದಿನ ದಿನಗಳಲ್ಲಿ ಕಾಲೇಜಿನಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಸಕ್ರಿಯವಾಗಿ ಪಾಲ್ಗೊಂಡು ಯಶಸ್ವೀಗೊಳಿಸಲು ಸಹಕರಿಸಿ ಎಂದು ಹೇಳುತ್ತಾ ನೂತನವಾಗಿ ಆಯ್ಕೆಗೊಂಡ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

Ad Widget . Ad Widget . Ad Widget . . Ad Widget . . Ad Widget .

. Ad Widget . Ad Widget . Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರುದ್ರಕುಮಾರ್ ಎಂ ಎಂ ವಹಿಸಿದ್ದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ. ಕೆ ಟಿ ವಿಶ್ವನಾಥ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲಾನಾಧಿಕಾರಿ ರತ್ನಾವತಿ ಡಿ, ಆಂತರಿಕ ಗುಣಮಟ್ಟ ಖಾತರಿ ಕೋಶ ಸಂಯೋಜಕಿ ಡಾ. ಮಮತ ಕೆ, ಶಿಕ್ಷಕ ರಕ್ಷಕ ಸಂಘದ ಆಧ್ಯಕ್ಷರಾದ ಚಿನ್ನಪ್ಪ ಗೌಡ, ವಿದ್ಯಾರ್ಥಿ ಸಂಘದ ನಾಯಕ ಆದಿತ್ಯ ಡಿ ಕೆ, ಉಪನಾಯಕಿ ಗಾನ ಬಿಡಿ, ಕಾರ್ಯದರ್ಶಿ ಸೂರ್ಯದರ್ಶನ್ ಪಿ ಎ, ಜೊತೆ ಕಾರ್ಯದರ್ಶಿ ಉಜಾನ ಕೆ, ಸಾಂಸ್ಕೃತಿಕ ಕಾರ್ಯದರ್ಶಿಗಳಾದ ದಕ್ಷಯ್ ಡಿ ಎಸ್ ಹಾಗೂ ಅಂಬಿಕಾ ಎಂ, ಹಾಗೂ ಕ್ರೀಡಾ ಕಾರ್ಯದರ್ಶಿಗಳಾದ ಶಶಾಂಕ್ ಪಿ ವಿ ಹಾಗೂ ತೃಪ್ತಿ ಪಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲಾನಾಧಿಕಾರಿ ರತ್ನಾವತಿ ಡಿ ವಿದ್ಯಾರ್ಥಿ ಸಂಘದ ಎಲ್ಲಾ ಪದಾಧಿಕಾರಿಗಳಿಗೆ ಪ್ರಮಾಣವಚನ ಭೋದಿಸಿದರು. ಬಳಿಕ ಅರ್ಹ ವಿದ್ಯಾರ್ಥಿಗಳಿಗೆ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ವಿದ್ಯಾರ್ಥಿ ವೇತನ ವಿತರಿಸಲಾಯಿತು.

ವಿದ್ಯಾರ್ಥಿನಿ ಶ್ರೀಲಯ ಪ್ರಾರ್ಥಿಸಿ, ಆದಿತ್ಯ ಡಿ ಕೆ ಸ್ವಾಗತಿಸಿದರು. ಅನ್ವಯ ಅಂತಿಮ ಬಿ.ಕಾಂ ಹಾಗೂ ಅಕ್ಷತಾ ಸಿ ದ್ವಿತೀಯ ಬಿ.ಎಸ್ಸಿ ಕಾರ್ಯಕ್ರಮ ನಿರೂಪಿಸಿದರು. ಸೂರ್ಯದರ್ಶನ್ ಪಿ ಎ ವಂದಿಸಿದರು.
ಕಾರ್ಯಕ್ರಮದಲ್ಲಿ ಭೋದಕ ಭೋದಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top