ರಾಜ್ಯ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಅವರನ್ನು ಅರಂತೋಡಿನ ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಸೋಮವಾರ ಅರಂತೋಡಿನಲ್ಲಿ ಸನ್ಮಾನಿಸಲಾಯಿತು.
ಡಾಕ್ಟರ್ ರಘು ಮತ್ತು ಟಿ ಎಂ. ಶಹೀದ್ ತೆಕ್ಕಿಲ್ ಅವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ತೆಕ್ಕಿಲ್ ಪ್ರತಿಷ್ಟಾನದ ಕಾರ್ಯದರ್ಶಿ ಹಾಗೂ ಅರಂತೋಡು ಮಸೀದಿ ಅಧ್ಯಕ್ಷ ಅಶ್ರಫ್ ಗುಂಡಿ,ಖಜಾಂಜಿ ಟಿ ಎಂ. ಜಾವೆದ್ ತೆಕ್ಕಿಲ್,ಅಲ್ಪ ಸಂಖ್ಯಾತರ ಸಹಕಾರಿ ಸಂಘದ ಅಧ್ಯಕ್ಷ ಇಟ್ಬಾಲ್ ಎಲಿಮಲೆ, ಗ್ಯಾರಂಟಿ ಸಮಿತಿ ಅಧ್ಯಕ್ಷ ಹಮೀದ್ ಕುತ್ತಮಟ್ಟೆ, ನಗರ ಪಂಚಾಯತ್ ಸದಸ್ಯರುಗಳಾದ ಶರೀಫ್ ಕಂಠಿ, ಸಿದ್ದಿಕ್ ಕೊಕೊ, ಅರೀಫ್ ತೆಕ್ಕಿಲ್ ಮೊದಲಾದವರು ಉಪಸ್ಥಿತರಿದ್ದರು.