ಸುಳ್ಯ: ಆರೋಗ್ಯ ಮತ್ತು ಮಾನಸಿಕ ವೃದ್ಧಿಗೆ ಕ್ರೀಡೆ ಸಹಕಾರಿ ಯಾಗುತ್ತದೆ . ಇದಕ್ಕೆ ಪೂರಕವಾಗಿ ಮನುಷ್ಯ ಹುಟ್ಟಿನಿಂದ ಕ್ರೀಡೆ ಸಹ ಹುಟ್ಟಿಕೊಂಡಿದೆ ಎಂದು ಜಾಲ್ಸೂರು ಪಯಸ್ವಿನಿ ಪ್ರೌಢಶಾಲಾ ಸಂಚಾಲಕ ಜಾಕೆ ಸದಾನಂದ ಅವರು ಹೇಳಿದರು.
ದಕ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಹಾಗೂ ಪಯಸ್ವಿನಿ ಪ್ರೌಢಶಾಲೆ ಜಾಲ್ಸೂರು ಇವುಗಳ ಆಶ್ರಯದಲ್ಲಿ ಪಯಸ್ವಿನಿ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟ ಉದ್ಘಾಟಿಸಿ ಅವರು ಮಾತನಾಡಿದರು.
ವೇದಿಕೆಯಲ್ಲಿ ಲಯನ್ಸ್ ಪ್ರಾಂತ್ಯದ ರಾಯಭಾರಿ ರೇಣುಕಾ ಸದಾನಂದ ಜಾಕೆ, ಶಾಲಾ ಮುಖ್ಯ ಶಿಕ್ಷಕಿ ಜಯಲ ತಾ ಕೆ.ಆರ್. ಇದ್ದರು. ಶಿಕ್ಷಕಿ ಸವಿತಾ ಕುಮಾರಿ ವಂದಿಸಿದರು.
ಶಿಕ್ಷಕ ಶಿವಪ್ರಕಾಶ ಕೆ ಕಾರ್ಯಕ್ರಮ ನಿರೂಪಿಸಿದರು. ಪಂದ್ಯಾಟವನ್ನು ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ. ಕೆ ನಡೆಸಿಕೊಟ್ಟರು. ತಾಲೂಕಿನ ನಾನಾ ಶಾಲಾ ವಿದ್ಯಾರ್ಥಿಗಳು ಪಂದ್ಯಾಟದಲ್ಲಿ ಭಾಗವಹಿಸಿದರು.