ಭೋಪಾಲ್ : ಭೋಪಾಲ್ ನಲ್ಲಿ ಭಯಾನಕ ಘಟನೆಯೊಂದು ವರದಿಯಾಗಿದೆ. ಖಾಸಗಿ ಶಾಲೆಯೊಂದರಲ್ಲಿ ಮೂರು ವರ್ಷದ ಬಾಲಕಿಯ ಮೇಲೆ ಶಿಕ್ಷಕನೊಬ್ಬಅತ್ಯಾಚಾರವೆಸಗಿದ್ದಾನೆ. ಘಟನೆ ಕುರಿತು ಬಾಲಕಿಯ ತಾಯಿ ಸೋಮವಾರ ಶಾಲಾ ಆಡಳಿತ ಮಂಡಳಿಗೆ ದೂರು ನೀಡಿದರೂ ನಿರ್ಲಕ್ಷ್ಯ ವಹಿಸಿದ್ದಾರೆ. ಸಂತ್ರಸ್ತೆಯ ತಾಯಿ ಶಿಕ್ಷಕನ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸಲಾಗಿದ್ದು, ಶಿಕ್ಷಕನ ವಿರುದ್ಧ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ. ಈ ಮಾಹಿತಿಯನ್ನು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.