ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆಗೆ ದನ ಹಾಗೂ ಇತರ ಪ್ರಾಣಿಗಳ ಎಣ್ಣೆ ಬಳಕೆ !

ತಿರುಪತಿ: ಪ್ರಾಣಿಗಳ ಎಣ್ಣೆ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದಲ್ಲಿ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕೆಲ ದಿನಗಳ ಹಿಂದೆ ಆರೋಪ ಮಾಡಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು.
ತಿರುಪತಿಯ ಭಕ್ತರ ನಂಬಿಕೆಗೆ ಚಂದ್ರಬಾಬು ನಾಯ್ಡು ಅವರ ಹೇಳಿಕೆ ಧಕ್ಕೆ ತಂದಿದೆ ಎಂದು ಟಿಟಿಡಿ ಅಧಿಕಾರಿಗಳು ವಾದಿಸಿದ್ದರು. ಟಿಟಿಡಿ ಮಾಜಿ ಮುಖ್ಯಸ್ಥರು ಚಂದ್ರಬಾಬು ನಾಯ್ಡು ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿಯೂ ಎಚ್ಚರಿಕೆ ನೀಡಿದ್ದರು. ಆದರೆ, ಚಂದ್ರಬಾಬು ನಾಯ್ಡು ಅವರ ಆರೋಪ ಸತ್ಯ ಎಂಬುದು ಇದೀಗ ಬಂದಿರುವ ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.
ಪ್ರಾಣಿಗಳ ಕೊಬ್ಬು ಬಳಸಿ ಲಡ್ಡು ತಯಾರಿಸಿದ್ದಾಗಿ ಟಿಟಿಡಿಯಿಂದ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಅಧಿಕೃತ ಸ್ಪಷ್ಟನೆ ನೀಡಲಾಗಿದೆ. ಲ್ಯಾಬ್ ವರದಿ ಬಿಡುಗಡೆ ಮಾಡಿ ಟಿಟಿಡಿ ಆಡಳಿತ ಮಂಡಳಿಯಿಂದ ಸ್ಪಷ್ಟನೆ ನೀಡಲಾಗಿದೆ.
ತಿರುಪತಿಯ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಮೀನಿನ ಎಣ್ಣೆ, ದನ ಸೇರಿದಂತೆ ಪ್ರಾಣಿಗಳ ಕೊಬ್ಬು ಇರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ. ಇದರಲ್ಲಿ ಹಂದಿಯ ಕೊಬ್ಬು, ದನದ ಕೊಬ್ಬು, ಪಾಮಾಯಿಲ್, ಸೋಯಾಬಿನ್, ಸೂರ್ಯಕಾಂತಿ ಎಣ್ಣೆ, ಮೆಕ್ಕೆ ಜೋಳ ಎಣ್ಣೆ ಬೆರೆಸಿದ ಕಡಿಮೆ ಗುಣಮಟ್ಟದ ತುಪ್ಪ ಬಳಕೆ ಮಾಡಲಾಗುತ್ತಿದೆ ಎಂದು ಖಚಿತಪಡಿಸಲಾಗಿದೆ ಎಂದು ತಿಳಿದು ಬಂದಿದೆ.

Ad Widget . Ad Widget
Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top