ಕಿನ್ನಿಗೋಳಿ : ಕೆಲ ವರ್ಷಗಳ ಹಿಂದೆ ಸುಳ್ಯ ನಗರ ನಗರ ಪಂಚಾಯತ್ ನಲ್ಲಿ ಮುಖ್ಯಾಧಿಕಾರಿಯಾಗಿದ್ದ ಪ್ರಸ್ತುತ ಕಿನ್ನಿಗೊಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿರುವ ಎಂ.ಆರ್. ಸ್ವಾಮಿ ಹಾಗೂ ಜೂನಿಯರ್ ಇಂಜಿನಿಯರ್ ನಾಗರಾಜ್ ಸೇರಿದಂತೆ ಇಬ್ಬರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂದಿಸಿದ್ದಾರೆ ಎಂದು ತಿಳಿದು ಬಂದಿದೆ.
ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ 5ನೇ ಹಣಕಾಸು ಯೋಜನೆಯಲ್ಲಿ ಗುತ್ತಿಗೆದಾರರ ಬಿಲ್ಲು ಮಂಜೂರಾತಿ ಬಗ್ಗೆ ಬಿಲ್ ಪಾಸ್ ಮಾಡಲು ಲಂಚ ನೀಡಬೇಕೆಂದು ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ.