ಹಾಸನ : ಹೃದಯಾಘಾತದಿಂದ 11 ವರ್ಷದ ಬಾಲಕ ಮೃತಪಟ್ಟ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನಾಪುರ ಗ್ರಾಮದಿಂದ ವರದಿಯಾಗಿದೆ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಸಚಿನ್‌ಗೆ ನಿನ್ನೆ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡಿತ್ತು. ಎದೆ ನೋವಿನಿಂದ ಶಾಲೆಗೆ ಹೋಗದೆ ಮನೆಯಲ್ಲೇ ಇದ್ದ. ಮನೆಯಲ್ಲಿರುವಾಗ ಏಕಾಏಕಿ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾನೆ.ಈ ಘಟನೆ ಗ್ರಾಮಸ್ಥರಲ್ಲಿ ಆತಂಕ ಹುಟ್ಟಿಸಿದೆ.