ಪುತ್ತೂರು: ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನಡೆದಿದೆ.
ಸೆ.21 ರಂದು ರಾತ್ರಿ ಪುರುಷರಕಟ್ಟೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಬೀಝಾ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ಸ್ಕೂಟರ್ ಸಮೇತ ರಸ್ತೆ ಬದಿಯ ಚರಂಡಿಗೆ ಎಸೆಯಪಟ್ಟಿದ್ದು ಗಂಭೀರ ಗಾಯಗೊಂಡರು.
ಗಂಭೀರ ಗಾಯಗೊಂಡಿರುವ ಸ್ಕೂಟರ್ ಸವಾರ ಹೋಳಿಗೆ ವ್ಯಾಪಾರಿ, ಪುರುಷರಕಟ್ಟೆ ಇಂದಿರಾ ನಗರ ನಿವಾಸಿ ಗಣೇಶ್ ಪ್ರಭು ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ತಂದು ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು ಎಂದು ತಿಳಿದು ಬಂದಿದೆ.