ಕಾರವಾರ : ಉದ್ಯಮಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿ ಅವರ ಪತ್ನಿಯನ್ನು ಗಂಭೀರವಾಗಿ ಗಾಯಗೊಳಿಸಿದ ಘಟನೆ ವರದಿಯಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಣಕೊಣ ಗ್ರಾಮದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ.
ಮಹಾರಾಷ್ಟ್ರದ ಪುಣೆಯ ಉದ್ಯಮಿ ವಿನಾಯಕ ನಾಯ್ಕ(52) ಎಂಬುವವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.
ಅವರ ಪತ್ನಿ ವೈಶಾಲಿ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದ್ದು. ಅವರನ್ನು ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆಯಲ್ಲಿ ದಂಪತಿಗಳು ಮಾತ್ರ ಇದ್ದರು ಎಂದು ತಿಳಿದು ಬಂದಿದೆ.
ಚಿತಾಕುಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪತ್ನಿ ಸಮೇತ ಪುಣೆಯಲ್ಲಿ ವಾಸವಾಗಿದ್ದ ವಿನಾಯಕ್ ಅವರು ಕಳೆದ ವಾರ ಗ್ರಾಮ ದೇವರ ಜಾತ್ರೆಗೆಂದು ಕಾರವಾರಕ್ಕೆ ಬಂದಿದ್ದರು. ನಸುಕಿನ ಜಾವ ಮನೆಗೆ ನುಗ್ಗಿದ ದುಷ್ಕರ್ಮಿಗಳು ದಂಪತಿ ಮೇಳೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ
ಮಚ್ಚಿನ ಏಟಿಗೆ ಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು. ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಮಹಿಳೆಯನ್ನು ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಇದು ಪೂರ್ವ ದ್ವೇಷದ ಕೊಲೆಯೊ ಅಥಾವ ದರೋಡೆಗಾಗಿ ನಡೆಸಿದ ಕೊಲೆಯೋ ಎನ್ನುವುದು ಮುಂದಿನ ತನಿಖೆಯಿಂದ ಗೊತ್ತಾಗಬೇಕಿದೆ.