ಜಾಲ್ಲೂರು : ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಪರಿವಾರ ದೈವಗಳ ಜೀರ್ಣೋದ್ಧಾರ ಬಗ್ಗೆ ನಿಧಿ ಸಂಕಲ್ಪ ಸಭೆಯು ದೇವಸ್ಥಾನದ ಶ್ರೀ ಕಾರ್ತಿಕೇಯ ಸಭಾಭವನದಲ್ಲಿ ಕುಂಟರು ರವೀಶ ತಂತ್ರಿಗಳ ಉಪಸ್ಥಿತಿಯಲ್ಲಿ ಜರುಗಿತು.
ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಸುಧಾಕರ ಕಾಮತ್ ವಿನೋಬನಗರ ಅವರು ಅಧ್ಯಕ್ಷತೆ ವಹಿಸಿದ್ದರು.
ದೇವಸ್ಥಾನದ ಪರಿವಾರ ಸಾನಿಧ್ಯಗಳಾದ ಕಳರಿ ಶ್ರೀ ಧೂಮಾವತಿ ದೈವಸ್ಥಾನ ಮತ್ತು ಶ್ರೀ ವಯನಾಟ್ ಕುಲವನ್ ಮಹಾವಿಷ್ಣುಮೂರ್ತಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯ ಬಾಕಿ ಉಳಿದಿದ್ದು, ಮುಂದಿನ ಒಂದು ವರ್ಷದೊಳಗೆ ಪೂರ್ತಿಗೊಳಿಸುವುದೆಂದು ತೀರ್ಮಾನ ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ಜೀರ್ಣೋದ್ದಾರ ಸಮಿತಿಯ ಕಾರ್ಯಾಧ್ಯಕ್ಷ ಮೋಹನ ನಂಗಾರು, ಜೀರ್ಣೋದ್ಧಾರ ಸಮಿತಿಯ ಸಂಯೋಜಕ ನ. ಸೀತಾರಾಮ, ದೇವಸ್ಥಾನದ ಮೊಕೇಸರ ಗುರುರಾಜ್ ಭಟ್ ಅಡ್ಕಾರು, ಅಡ್ಡಂತಡ್ಕ ದೇರಣ್ಣ ಗೌಡ, ಜಯರಾಮ ರೈ ಜಾಲ್ಲೂರು ಸೇರಿದಂತೆ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಬೈಲುವಾರು ಸಮಿತಿಯ ಸಂಚಾಲಕರುಗಳು, ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು. ನಿವೃತ್ತ ಎ.ಎಸ್.ಐ. ಭಾಸ್ಕರ ಅಡ್ಕಾರು ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.