ಅರಂತೋಡು : ಪೆರಾಜೆಯ ಕಲ್ಬರ್ಪೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆ ಎಸ್ ಆರ್ ಟಿ ಸಿ ಬಸ್ಸು ರಸ್ತೆ ಬದಿಯ ಚರಂಡಿಗೆ ಇಳಿದ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ.
ಮಂಗಳೂರಿನಿಂದ ಮಂಡ್ಯಕ್ಕೆ ಹೋಗುತ್ತಿದ್ದ ಬಸ್ಸು ಕಲ್ಲುಚರ್ಪೆ ಬಳಿ ತಿರುವುನಲ್ಲಿ ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಸೈಡ್ ಕೊಡಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಉಂಟಾಗಿದೆ ಎನ್ನಲಾಗಿದೆ.
ಬಸ್ಸಿನಲ್ಲಿ ಸುಮಾರು 24 ಮಂದಿ ಪ್ರಯಾಣಿಕರು ಇದ್ದು ಅಪಾಯದಿಂದ ಪಾರಾಗಿದ್ದಾರೆ.