ಸುಳ್ಯ : ವಿದ್ಯಾರ್ಥಿನಿ ಬಸ್ಸಲ್ಲಿ ಬರುತ್ರಿದ್ದಾಗ ಲೈಂಗಿಕ ದೌರ್ಜನ್ಯ ಎಸಗಿದ ಅಬ್ದುಲ್ ನಿಯಾಝ್ ಮೇಲೆ ಗುಂಪು ಹಲ್ಲೆ ನಡೆಸಲಾಗಿದೆ ಎನ್ನಲಾಗಿದ್ದು ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಯುವಕನನ್ನು ಸುಳ್ಯ ಪೊಲೀಸರು ಬಂಧಿಸಿ ಸುಳ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ ಎಂದು ತಿಳಿದು ಬಂದಿದೆ.ಆರೋಪಿಗಳಲ್ಲಿ ಓರ್ವನಾದ ಸುಶ್ಮಿತ್ ಎಂಬಾತ ಕುಮಟದಲ್ಲಿ ಇರುವ ಬಗ್ಗೆ ಮಾಹಿತಿ ಪಡೆದ ಪೋಲಿಸರು ಆತನನ್ನು ಬಂಧಿಸಿ ಸುಳ್ಯಕ್ಕೆ ಕರೆ ತಂದಿದ್ದು ನ್ಯಾಯಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ ಎಂದು ತಿಳಿದು ಬಂದಿದೆ.