ವಿಟ್ಲ: ಇದ್ದಕ್ಕಿದಂತೆ ಅನಾರೋಗ್ಯಕ್ಕೆ ಒಳಗಾಗಿ ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ, ಬಿಜೆಪಿ ಮುಖಂಡ ಸುಮಾರು 38 ವರ್ಷ ಪ್ರಾಯದ ಉಮೇಶ್ ಗೌಡ ಗುರುವಾರ ರಾತ್ರಿ ನಿಧನ ಹೊಂದಿದರು. ವೃತ್ತಿಯಲ್ಲಿ ಅವರು ಕೃಷಿಕರಾಗಿದ್ದರು. ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ಮಪ್ಪಿದರು.