ಅಕ್ಟೋಬರ್ 3ರಿಂದ 20ರವರೆಗೆ ಶಾಲಾ ಮಕ್ಕಳಿಗೆ ದಸರಾ ರಜೆ
ಬೆಂಗಳೂರು: ಪ್ರಸಕ್ತ ಸಾಲಿನ ಶೈಕ್ಷಣಿಕ ವೇಳಾಪ ಟ್ಟಿಯಂತೆಅಕ್ಟೋಬರ್3 ರಿಂದ 20ರವರೆಗೆ ಶಾಲಾ ಮಕ್ಕಳಿಗೆ ದಸರಾ ರಜೆ ಇರಲಿದೆ. ಕಳೆದ ಏಪ್ರಿಲ್‌ನಲ್ಲೇ ಪ್ರಕಟಿಸಿರುವ ವೇಳಾಪಟ್ಟಿಯಂತೆ ಅ.1ರವರೆಗೆ ತರಗ ತಿಗಳು ನಡೆಯಲಿವೆ. ಅ.2ರಂದು ಗಾಂಧಿಜಯಂತಿ ಇರ ಲಿದ್ದು, ಅ. 3 ರಿಂದ 20 ರವರೆಗೆ ರಾಜ್ಯ ಪಠ್ಯಕ್ರಮದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲಾ ಮಕ್ಕಳಿಗೆ ದಸರಾ ರಜೆ ಇರಲಿದೆ. ಅ. 21 ರಿಂದ ಮತ್ತೆ ತರಗತಿಗಳು ಪುನಾರಂಭವಾಗಲಿವೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಅಕ್ಟೋಬರ್ 3ರಿಂದ 20ರವರೆಗೆ ಶಾಲಾ ಮಕ್ಕಳಿಗೆ ದಸರಾ ರಜೆ Read More »