ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (MUDA)ಹಗರಣ ನಡೆದಿದೆ ಎನ್ನಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯವು (ಈಡಿ) ಸೋಮವಾರ(ಸೆ.30) ಪ್ರಕರಣ ದಾಖಲಿಸಿದೆ.
ಲೋಕಾಯುಕ್ತ ಎಫ್ ಐಆರ್ ನಲ್ಲಿ ಉಲ್ಲೇಖವಾದ ಹೆಸರುಗಳ ಮೇಲೆ ಇಡಿ ಇಸಿಐಅರ್ ದಖಾಲಾಗಿದೆ.
ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ಹೆಸರುಗಳ ಉಲ್ಲೇಖವಾಗಿದೆ ಎಂದು ತಿಳಿದು ಬಂದಿದೆ.