ಮೈಸೂರು: ಮುಡಾ ಹಗರಣ ನಡೆದಿದೆ ಎಂದು ದೂರು ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಂಕಷ್ಟ ತಂದೊಡ್ಡಿರುವ ಸ್ನೇಹಮಯಿ ಕೃಷ್ಣ ವಿರುದ್ದ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ.
ಹಳಯ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಕೋರ್ಟ್ ವಾರೆಂಟ್ ಜಾರಿ ಮಾಡಿದೆ. ಎನ್.ಕುಮಾರ್ ಎಂಬುವವರು 2015ರಲ್ಲಿ ರಲ್ಲಿ ಆರ್‌ಟಿಐ ಕಾರ್ಯಕರ್ತ ಹಾಗೂ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು.
ಅಕ್ಟೋಬರ್ 1ರಂದು ಮಂಗಳವಾರ ವಿಚಾರಣೆಗೆ ದಿನಾಂಕ ನಿಗಧಿ ಪಡಿಸಲಾಗಿತ್ತು. ಆದರೆ ವಿಚಾರಣೆಗೆ ಸ್ನೇಹಮಯಿ
ಕೃಷ್ಣ ಗೈರು ಹಾಜರಾದ ಕಾರಣ ನ್ಯಾಯಾಲಯವು ಜಾಮೀನು ರಹಿತ ಬಂಧನ ಆದೇಶ ಹೊರಡಿಸಿದೆ.