ಬೆಳ್ತಂಗಡಿ : ತಲೆಯ ಮೇಲೆ ಭಾಗಿಲಿನ ದಾರಂದ ಬಿದ್ದು ಪುಟ್ಟ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳ್ತಂಗಡಿಯ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾದ ಕೊನಲೆ ಎಂಬಲ್ಲಿ ನಡೆದಿದೆ.
ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿ ಪುತ್ರಿ, ಕೇರ್ಯಾ ಸರಕಾರಿ ಶಾಲೆಯ 1 ನೇ ತರಗತಿಯ ಅಲ್ಪಿಯಾ (6) ಮೃತ ಬಾಲಕಿಯಾಗಿದ್ದಾಳೆ. ಮಗುವಿನ ತಂದೆ ಕುಂಡಡ್ಕದಲ್ಲಿ ನೂತನ ಮನೆಯನ್ನು ನಿರ್ಮಾಣ ಮಾಡುತ್ತಿದ್ದಾರೆ. ನಾಳೆ ಮನೆಯ ಮುಖ್ಯ ದ್ವಾರಕ್ಕೆ ದಾರಂದ ಜೋಡಿಸಲು ಮನೆಯ ಪಕ್ಕದಲ್ಲಿ ದಾರಂದವನ್ನು ಜೋಡಿಸಿದ್ದರು. ಈ ಸಂದರ್ಭದಲ್ಲಿ ಮಗು ಅದರ ಪಕ್ಕದಲ್ಲಿ ಆಟವಾಡುತ್ತಿರುವಾಗ ದಾರಂದವು ಆಯಾ ತಪ್ಪಿ ಮಗುವಿನ ತಲೆಗೆ ಬಿದ್ದು ಗಂಭೀರ ಗಾಯಗೊಂಡಿತು. ಕೂಡಲೇ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮಗು ಸಾವನ್ನಪ್ಪಿದೆ ಎನ್ನಲಾಗಿದೆ.