ಕನಕಮಜಲಿನ ಕನಕದಾಸ ಮಕ್ಕಳ ಭಜನಾ ಮಂಡಳಿ ಇದರ ವಾರ್ಷಿಕ ಸಂಭ್ರಮ ಕಾರ್ಯಕ್ರಮ ಅ. 8ರಂದು ಸಂಜೆ ಕನಕಮಜಲು ಪೆರಂಬಾರಿನ ಮದಿಮಾಳು ಪಾದೆ ಶ್ರೀ ದುರ್ಗಾದೇವಿ ಅಮ್ಮನವರ ಕ್ಷೇತ್ರ ನಡೆಯಿತು.
ರಾಮಕೃಷ್ಣ ಕಾಟುಕುಕ್ಕೆ ಇವರ ದಿವ್ಯ ಉಪಸ್ಥಿತಿಯಲ್ಲಿ ‘ಸಮೂಹ ಗಾಯನ’ ನಡೆದ ಬಳಿಕ ಗುರುವಂದನಾ ಕಾರ್ಯಕ್ರಮ ನಡೆಯಿತು.
ಕನಕದಾಸ ಮಕ್ಕಳ ಭಜನಾ ಮಂಡಳಿಯ ಅಧ್ಯಕ್ಷೆ ಕು. ಆಕಾಂಕ್ಷ ಕಜೆಗದ್ದೆ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಣ್ಣಗೌಡ ಪೆರುoಬಾರು, ಕಾರ್ಯದರ್ಶಿ ವಾಸುದೇವ
ಪೆರುoಬಾರು, ಉತ್ಸವ ಸಮಿತಿಯ ಅಧ್ಯಕ್ಷ ವೆಂಕಟ್ರಮಣ ಗೌಡ ಅಕ್ಕಿಮಲೆ, ಕಾರ್ಯದರ್ಶಿ ಜಯಪ್ರಸಾದ್ ಕಾರಿಂಜ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮದ್ವಾಧೀಶ ವಿಠಲದಾಸ ನಾಮಾಂಕಿತ ದಾಸ ಸಾಹಿತ್ಯ ಸಂಕೀರ್ತನಕಾರ ರಾಮಕೃಷ್ಣ ಕಾಟುಕುಕ್ಕೆಯವರಿಗೆ ಗುರುವಂದನೆ ಕಾರ್ಯಕ್ರಮ ನಡೆಯಿತು.
ಭಜನಾ ಮಂಡಳಿಯ ನಿರ್ದೇಶಕಿ ಶ್ರೀಮತಿ ಹೇಮಾ ಗಣೇಶ್ ಕಜೆಗದ್ದೆ ದಂಪತಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ವಾರ್ಷಿಕ ಸಂಭ್ರಮದ ಪ್ರಯುಕ್ತ ಮಂಡಳಿಯ ವಿದ್ಯಾರ್ಥಿಗಳಿಗೆ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಕಾರ್ಯಕ್ರಮವು ನಡೆಯಿತು.
ನಿರ್ದೇಶಕಿ ಹೇಮಲತಾ ಕಜೆಗದ್ದೆ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ರಾಮಕೃಷ್ಣ ಕಾಟುಕುಕ್ಕೆಯವರಿಂದ- ದಾಸವಾಣಿ ಭಜನಾಮೃತ ಕಾರ್ಯಕ್ರಮ ನಡೆಯಿತು.