ಮುಂಬಯಿ: ಅ.9ರಂದು ನಿಧನರಾದ ಖ್ಯಾತ ಉದ್ಯಮಿ ರತನ್ ಟಾಟಾ ಅವರ ಅಂತ್ಯಕ್ರಿಯೆ ಅ.10ರಂದು ಸಕಲ ಸರಕಾರಿ ಗೌರವದೊಂದಿಗೆ ಪಾರ್ಸಿ ಸಮುದಾಯದ ವಿಧಿವಿಧಾನಗಳ ಪ್ರಕಾರ ನಡೆಸಲಾಯಿತು
ಬಳಿಕ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು.
ಟಾಟಾ ಅವರ ಪಾರ್ಥಿವ ಶರೀರವನ್ನು ದಕ್ಷಿಣ ಮುಂಬೈನ ನಾರಿಮನ್ ಪಾಯಿಂಟ್‌ನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್‌ನಲ್ಲಿ (ಎನ್‌ಸಿಪಿಎ) ಗುರುವಾರ ಬೆಳಗ್ಗೆ 10.30 ರಿಂದ ಸಂಜೆ 4 ರವರೆಗೆ ಸಾರ್ವಜನಿಕರಿಗೆ ಗೌರವ ಸಲ್ಲಿಸಲು ಇಡಲಾಗಿತ್ತ.ಗಣ್ಯರು ಸೇರಿ ಸಾವಿರಾರು ಜನರು ಅಂತಿಮ ನಮನ ಸಲ್ಲಿಸಿದರು.