ಸುಳ್ಯ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿಯ ವತಿಯಿಂದ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ಸುಳ್ಯ ದಸರಾ -2024ರ ಅಂಗವಾಗಿ ದಿನ ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.
ಎರಡನೇ ದಿನದ ಗುರುವಾರ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನಾಟ್ಯ ನಿಲಯಂ ಗುರು ಬಾಲಕೃಷ್ಣ ಮಂಜೇಶ್ವರ ಹಾಗೂ ಶಿಷ್ಯ ವೃಂದದವರಿಂದ ‘ನೃತ್ಯ ಸಂಕಲ್ಪಂ’ ಭರತನಾಟ್ಯ ಕಾರ್ಯಕ್ರಮ ಜರುಗಿತು.