ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಕವರಪ್ಪೆಟ್ಟೆ ರೈಲು ನಿಲ್ದಾಣದ ಬಳಿ ಶುಕ್ರವಾರ ರಾತ್ರಿ ಪ್ಯಾಸೆಂಜರ್ ಎಕ್ಸ್‌ಪ್ರೆಸ್ ರೈಲು, ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದಿದೆ. ಈ ಅವಘಡದಲ್ಲಿ ಪ್ಯಾಸೆಂಜರ್ ಎಕ್ಸ್‌ಪ್ರೆಸ್ ರೈಲಿನ 2 ಬೋಗಿಗಳಿಗೆ ಬೆಂಕಿ ತಗುಲಿದೆ. ಪ್ಯಾಸೆಂಜರ್ ರೈಲಿನ ಕೆಲವು ಬೋಗಿಗಳು ಹಳಿತಪ್ಪಿದ್ದು ಯಾವುದೇ ಪ್ರಾಣಹಾನಿಯ ಕುರಿತು ವರದಿಯಾಗಿಲ್ಲ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.