ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ನುಗ್ಗಿ ಪಲ್ಟಿಯಾಗಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಕೊಡಗು ಸಂಪಾಜೆ ಶಾಲೆಯ ಬಳಿ ನಡೆದಿದೆ.
ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಗಾಯಾಳುಗಳನ್ನು ಕೊಡಗು ಸಂಪಾಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಂಪಾಜೆ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.