ಪೈಚಾರ್ ಆರ್ತಾಜೆ ಬಳಿ ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಸವಾರ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಬೈಕುಗಳ ನಡುವೆ ಅಪಘಾತ ಸಂಭವಿಸಿದ ವೇಳೆ ತೀವ್ರ ಗಾಯವಾಗಿದ್ದ ಒಂದು ಬೈಕಿನ ಸವಾರನನ್ನು ಆಸ್ಪತ್ರೆಗೆ ಸಾಗಿಸಿದರೂ ಮಾರ್ಗ ಮಧ್ಯೆ ಮತಪಟ್ಟಿರುವುದಾಗಿ ತಿಳಿದು ಬಂದಿದೆ.
ಮತ್ತೊಂದು ಬೈಕಿನಲ್ಲಿ ಇದ್ದ ಇಬ್ಬರು ಸವಾರರೂ ಗಾಯಗೊಂಡಿದ್ದು ಅವರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.