ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರು ಆಗಿದೆ ಎಂದು ತಿಳಿದು ಬಂದಿದೆ. ಬೆದರಿಕೆ, ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬೆನ್ನಲ್ಲೇ ಇದೀಗ ಅತ್ಯಾಚಾರ ಪ್ರಕರಣದಲ್ಲೂ ಸಹ ಮುನಿರತ್ನಗೆ ಜಾಮೀನು ದೊರೆತಿದೆ. ಮಂಗಳವಾರ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುನಿರತ್ನ ಅವರಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.