ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿಯ ವತಿಯಿಂದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆಯುತ್ತಿರುವ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ಸುಳ್ಯ ದಸರಾ ಕಾರ್ಯಕ್ರಮದ ಏಳನೇ ದಿನವಾದ ಅ.15ರಂದು ರಾತ್ರಿ ಶ್ರೀ ಮಹಾಗಣಪತಿ ಹವನ ಸಹಿತ ಶ್ರೀ ಚಂಡಿಕಾ ಮಹಾಯಾಗ ಮತ್ತು ಅಷ್ಟಾವಧಾನ ಸೇವೆ ಮತ್ತು ಮಾತೆಯರಿಂದ ಸಾಮೂಹಿಕ ಕುಂಕುಮಾರ್ಚನೆ ಶ್ರದ್ದಾ ಭಕ್ತಿಯಿಂದ ನಡೆಯಿತು.
ರಾತ್ರಿ ಶ್ರೀದೇವಿಗೆ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ನೆರವೇರಿತು.ಈ ಸಂದರ್ಭದಲ್ಲಿ ಶ್ರೀ ಶಾರದಾಂಬ ದಸರಾ ಸಮೂಹ ಸಮಿತಿಯ ಪದಾಧಿಕಾರಿಗಳು ಭಕ್ತರು ಉಪಸ್ಥಿತರಿದ್ದರು.