ಪೈಚಾರ್ : ಸುಳ್ಯದ ಪೈಚಾರ್ ಆರ್ತಾಜೆ ಬಳಿಯಲ್ಲಿ ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಮೃತಪಟ್ಟವರು ಐವರ್ನಾಡು ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರಿ ಸಂಘದ ಸಿಬ್ಬಂದಿ ಬೊಜಪ್ಪ ಗೌಡ ಪಾಲೆಪ್ಪಾಡಿ ಎಂದು ಗುರುತಿಸಲಾಗಿದೆ. ಬೈಕ್ ಗಳ ನಡುವೆ ಸಂಭವಿಸಿದ ಡಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆನ್ನಲಾಗಿದೆ. ಬುಲೆಟ್ ಬೈಕ್ ನಲ್ಲಿ ತೆರಳುತ್ತಿದ್ದ ಅರುಣ ಎಲಿಮಲೆ ಹಾಗೂ ವಸಂತ ಸೇವಾಜೆ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.