ಭಾರತದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಮುಂದಿನ ನಾಲ್ಕು ದಿನ ತೆಲಂಗಾಣ, ಆಂಧ್ರಪ್ರದೇಶ, ಪುದುಚೇರಿ ಮತ್ತು ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಹೀಗಾಗಿ ಈ ರಾಜ್ಯಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅನೇಕ ಕಂಪನಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಸೂಚಿಸಲಾಗಿದೆ. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹ ಮಹತ್ವದ ಸೂಚನೆ ನೀಡಿದ್ದಾರೆ. ಜನರು ಮನೆಯಲ್ಲಿಯೇ ಇರಿ ಎಂದು ಐಎಮ್‌ಡಿ ಎಚ್ಚರಿಸಿದೆ