ಪೆರಾಜೆ : ಪೆರಾಜೆಯ ಬಂಗಾರ ಕೋಡಿಯಿಂದ ಮಡಿಕೇರಿಗೆ ಸಂಚರಿಸುತ್ತಿದ್ದ ಖಾಸಗಿ ಅಟೋ ರಿಕ್ಷಾಕ್ಕೆ ಜೋಡುಪಾಲದಲ್ಲಿ ವಿರುದ್ದ ದಿಕ್ಕಿನಲ್ಲಿ ಬಂದ ಲಾರಿಯೊಂದು ಡಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಕುಟುಂಬ ಗಾಯಗೊಂಡು ಪ್ರಾಣಾಪಾಯದಿಂದ ಪಾರಾದ ಘಟನೆ ವರದಿಯಾಗಿದೆ.
ಬಂಗಾರಕೋಡಿಯ ಲೋಹಿತ್ ಅವರು
ಕುಟುಂಬ ಸಮೇತರಾಗಿ ಮಡಿಕೇರಿಗೆ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಲೋಹಿತ್ ಅವರಿಗೆ ಮತ್ತು ಅವರ ಪತ್ನಿಗೆ ಗಾಯವಾಗಿದ್ದು ಮಡಿಕೇರಿ ಸರಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಮಕ್ಕಳು ಚಿಕ್ಕ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.