ಕಡಬ : ಕಡಬ ತಾಲೂಕಿನ ಐತ್ತೂರು ಗ್ರಾಮದಲ್ಲಿ ಹೊಟ್ಟೆನೋವಿನಿಂದ ಬಳುತ್ತಿದ್ದ ವ್ಯಕ್ತಿಯೊಬ್ಬರು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಐತ್ತೂರು ಗ್ರಾಮದ ಬೆತ್ತೋಡಿ ನಿವಾಸಿ ಪರಮಶಿವಂ (65) ಮೃತಪಟ್ಟವರು.
ಕೃಷಿ ಕೆಲಸ ಮಾಡಿಕೊಂಡಿದ್ದ ಇವರು ಇತ್ತೀಚೆಗೆ ಹೊಟ್ಟೆನೋವಿನಿಂದ ಬಳಲುತ್ತಿದ್ದು ಮಾನಸಿಕವಾಗಿ ನೊಂದು ಅ.12ರಂದು ವಿಷ ಪದಾರ್ಥ ಸೇವಿಸಿ ಅಸ್ವಸ್ಥರಾಗಿದ್ದರು.
ಮನೆ ಮಂದಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಿದ್ದರು. ಬಳಿಕ ವೆಸ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಚೇತರಿಸಿಕೊಂಡ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿಸಿ ಮನೆಗೆ ಕರೆದುಕೊಂಡು ಬರುತ್ತಿರುವಾಗ ದಾರಿ ಮಧ್ಯೆ ಮೃತಪಟ್ಟರು. ಮೃತರ ಪುತ್ರ ನಾಗರಾಜ ಎಮ್ ಎಂಬವರು ನೀಡಿದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.