ಬೆಂಗಳೂರು : ಬೆಂಗಳೂರಿನಲ್ಲಿ ವಿದ್ಯಾರ್ಥಿನಿಯೊಬ್ಬಳು ಕ್ಷುಲ್ಲಕ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ವರದಿಯಾಗಿದೆ. ಶ್ರಾವ್ಯ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಶ್ರಾವ್ಯ ತನ್ನ ಅಕ್ಕನ ಜೊತೆ ಬೆಡ್ ಶೀಟ್ ಬಗ್ಗೆ ಜಗಳವಾಡಿದ್ದಳು. ಇದರಿಂದ ಮನನೊಂದು ಶ್ರಾವ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.