ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಡಿಸೈರ್ ಕಾರ್ ಚಾಲಕನ ನಿಯಂತ್ರಣ ತಪ್ಪಿ ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನಕ್ಕೆ ತಿರುಗುವ ವಿಷ್ಣು ಸರ್ಕಲ್ ಬಳಿ ವಿದ್ಯುತ್ ಕಂಬಕ್ಕೆ ಹೊಡೆದಿದೆ.
ಅಪಘಾತಕ್ಕೆ ಕಾರಿನ ಮುಂಭಾಗ ಜಖಂಗೊಂಡಿದ್ದು ವಿದ್ಯುತ್ ಕಂಬ ತುಂಡಾಗಿ ಕಾರಿನ ಮೇಲೆ ಬಿದ್ದಿದೆ.ಪ್ರಯಾಣಿಕರು ಗಾಯಗೊಂಡು ಪ್ರಾಣಾಪಾಯಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.