ತೆಂಕುತಿಟ್ಟು ಪ್ರಸಿದ್ದ ಹಾಸ್ಯ ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇಂದು (ಸೋಮವಾರ) ಬೆಳಗ್ಗೆ ನಿಧನ ಹೊಂದಿದ್ದಾರೆ.
ಅವರಿಗೆ 67 ವರ್ಷ ಪ್ರಾಯವಾಗಿತ್ತು.
ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ತೆರಳಿದ್ದ ಅವರಿಗೆ ಇಂದು ಮುಂಜಾನೆ ನಾಲ್ಕು ಗಂಟೆಗೆ ಬೆಂಗಳೂರಿನಲ್ಲಿ ಹೃದಯಘಾತವಾಗಿದೆ ಎಂದು ತಿಳಿದು ಬಂದಿದೆ.
ಹಿರಿಯ ಯಕ್ಷಗಾನಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಹೋಗಿದ್ದರು. ಅವರನ್ನುಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.ಅನೇಕ ಅಭಿಮಾನಿಗಳು,ಯಕ್ಷಗಾನ ಕಲಾವಿದರು ಜಯರಾಮ ಆಚಾರ್ಯರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.