ಹೊಳೆ ನರಸಿಪುರ, ಅರಕಲಗೂಡು, ಕೆ.ಪಿ.ಸಿ.ಸಿ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿ ಟಿ.ಎಂ ಶಹೀದ್ ತೆಕ್ಕಿಲ್ ನೇಮಕ

ಹೊಳೆ ನರಸಿಪುರ, ಅರಕಲಗೂಡು ವಿಧಾನ ಸಭಾ ಕ್ಷೇತ್ರದ ನಾಲ್ಕು ಬ್ಲಾಕ್ ಉಸ್ತುವಾರಿಯಾಗಿ, ಹಾಸನ ಜಿಲ್ಲೆ ಮತ್ತು ಉಪಚುನಾವಣೆ ನಡೆಯುತ್ತಿರುವ ಶಿಗ್ಗಾಂವಿ ವಿಧಾನ ಸಭಾ ಕ್ಷೇತ್ರದ ಕೆ.ಪಿ.ಸಿ.ಸಿ ವೀಕ್ಷರಾಗಿ ಕಾಂಗ್ರೆಸ್ ಮುಖಂಡ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ರವರನ್ನು ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ನೇಮಕಗೊಳಿಸಿರುತ್ತಾರೆ. ಕ್ಷೇತ್ರದ ಉಸ್ತುವಾರಿ ವಹಿಸಿಕೊಂಡು ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಸಂಬಂಧಿದಂತೆ ಪಕ್ಷ ಬಲವರ್ಧನೆಗೆ ಕಾರ್ಯ ಚಟುವಟಿಕೆ ನಡೆಸಲು ಮತ್ತು ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ದುಡಿಯಲು ಕೋರಿರುತ್ತಾರೆ.
ಇವರು ತಾಲೂಕು ಎನ್.ಎಸ್.ಯು.ಐ. ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಎನ್.ಎಸ್.ಯು.ಐ. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಎನ್.ಎಸ್.ಯು.ಐ.ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಎನ್.ಎಸ್.ಯು.ಐ. ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಯಾಗಿ, ಕೆ.ಪಿ.ಸಿ.ಸಿ ಯ ಮುಖ್ಯ ವಕ್ತಾರರಾಗಿ, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ, ಸೇವೆ ಸಲ್ಲಿಸಿರುತ್ತಾರೆ. ಕೆ.ಪಿ.ಸಿ.ಸಿ ಯ ಕಾರ್ಯದರ್ಶಿಯಾಗಿ, ಹಾವೇರಿ ಜಿಲ್ಲೆಯ ಹಿರೆಕೆರೂರು ವಿಧಾನ ಸಭಾ ಕ್ಷೇತ್ರ, ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನ ಸಭಾಕ್ಷೇತ್ರ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಹಾಗೂ ಲೋಕಸಭಾ ಚುನಾವಣೆ ಸಂಧರ್ಭದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಮತ್ತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನ ಸಭಾ ಕ್ಷೇತ್ರದ ಉಸ್ತುವಾರಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುತ್ತಾರೆ. 2002 ರಲ್ಲಿ ದೆಹಲಿಯಲ್ಲಿ ನಡೆದ ಎ.ಐ.ಸಿಸಿ ಸಮ್ಮೇಳನದಲ್ಲಿ ಹಾಗೂ 60 ನೇ ಪೂರ್ಣ ಅಧಿವೇಶನದಲ್ಲಿ ರಾಜ್ಯದ ಪ್ರತಿನಿಧಿಯಾಗಿ ಭಾಗವಹಿಸಿದರು. ಪ್ರಸ್ತುತ ಪಕ್ಷದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ನ ಸದಸ್ಯರಾಗಿ, ಕಾರ್ಮಿಕ ಮಂಡಳಿಯ ಸದಸ್ಯರಾಗಿ, ಕರ್ನಾಟಕ ರಾಜ್ಯ ಅರಣ್ಯ ನಿಗಮದ ನಿರ್ದೇಶಕರಾಗಿ, ಎರಡು ಬಾರಿ ಕೇಂದ್ರ ನಾರು ಮಂಡಳಿ ಸದಸ್ಯರಾಗಿ ಪ್ರಸ್ತುತ ಕರ್ನಾಟಕ ರಾಜ್ಯ ರಾಜೀವ್ ಯೂತ್ ಪೌಂಡೇಶನ್ ನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅರಂತೋಡು ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾಗಿ, ಕಳೆದ ಮೂರು ದಶಕಗಳಿಂದ ಸಾಮಾಜಿಕ, ರಾಜಕೀಯ ಶೈಕ್ಷಣಿಕ, ಧಾರ್ಮಿಕ, ಸಹಕಾರಿ, ಮತ್ತು ಕ್ರೀಡಾ ಕ್ಷೇತ್ರದಲ್ಲಿ ಕ್ರೀಯಾಶೀಲರಾಗಿರುವ ಇವರು ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆಯನ್ನು ನಡೆಸಿಕೊಂಡು ಬರುತ್ತಿದ್ದಾರೆ ಮತ್ತು ವಿವಿಧ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ಸುಳ್ಯ ತಾಲೂಕು ಅಲ್ಪ ಸಂಖ್ಯಾತರ ವಿವಿದ್ಧೋದೇಶ ಸಹಕಾರಿ ಸಂಘದಲ್ಲಿ 7 ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.

Ad Widget . Ad Widget . Ad Widget . . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top