ಶಿಕ್ಷಕ ವೃತ್ತಿ ಶ್ರೇಷ್ಠವಾದುದು : ಶಾಸಕಿ ಭಾಗೀರಥಿ ಮುರುಳ್ಯ

ಅರಂತೋಡು : ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುದಿರ್ಘವಾಗಿ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ದ.ಕ. ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಕಿ ಸರಸ್ವತಿ ಅವರಿಗೆ ವಿದಾಯ ಸಮಾರಂಭ ಹಾಗೂ ಸಮುದಾಯದತ್ತ ಶಾಲಾ ಕಾರ್ಯಕ್ರಮವು. ಅ. 29ರಂದು ಶಾಲಾ ಸಭಾವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಶಾಸಕಿ ಭಾಗೀರಥಿ ಮುರುಳ್ಯ ಅವರು ಉದ್ಘಾಟಿಸಿ ಬಳಿಕ ಮಾತನಾಡಿ ಶಿಕ್ಷಕ ವ್ರತ್ತಿ ಒಂದು ಶ್ರೇಷ್ಟ ವ್ರತ್ತಿ.ಇದನ್ನು ಸಮರ್ಕವಾಗಿ ನಿರ್ವಹಿಸಿದ್ದಾಗ ಶಿಕ್ಷಕ ವ್ರತ್ತಿಗೆ ಗೌರವ ಬರುತ್ತದೆ ಎಂದು ಹೇಳಿದರು.
ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಆಡ್ತಲೆ ಅಧ್ಯಕ್ಷತೆ ವಹಿಸಿದ್ದರು.
ನಿವೃತ್ತ ಶಿಕ್ಷಕಿ ಸರಸ್ವತಿ ಹಾಗೂ ಚಿದಾನಂದ ಮಾಸ್ತ‌ರ್ ಅಡ್ತಲೆ ದಂಪತಿಗಳನ್ನು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಪ್ರಾಂಶು ಪಾಲರಾದ ಕೆ.ಆ‌ರ್.ಗಂಗಾಧರ ಸನ್ಮಾನಿಸಿ ಮಾತನಾಡಿ ಸರಸ್ವತಿ ಟೀಟರ್ ಶಾಲೆಯ ಸರ್ವೊತ್ತೋಮುಖ ಅಭಿವ್ರದ್ದಿಗೆ ಶ್ರಮಿಸಿದ್ದಾರೆ.ಅವರು ವಿದ್ಯಾರ್ಥಿಗಳನ್ನು ಪ್ರೀತಿಯಿಂದ ಕಾಣುತ್ತಿದ್ದರು ಎಂದು ಹೇಳಿದರು.ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಚಂದ್ರಶೇಖರ ಪೇರಾಲು
ಅಭಿನಂದನ ಭಾಷಣ ಮಾಡಿ ಶಿಕ್ಷಕ ವ್ರತ್ತಿ ಸಮಾಜದಲ್ಲಿ ಗೌರವ ತಂದು ಕೊಡುವ ಕೆಲಸವಾಗಿದೆ.ತಮ್ಮ ವ್ರತ್ತಿಗೆ ಚ್ಯುತಿ ಬಾರದಂತೆ ಅರಂತೋಡು ಪ್ರಾಥಮಿಕ‌ ಶಾಲೆಯಲ್ಲಿ ಸರಸ್ವತಿಯವರು ಶ್ರೇಷ್ಠ ಕೆಲಸ ಮಾಡಿದ್ದಾರೆ.ಅವರ ಭವಿಷ್ಯ ಉಜ್ವಲವಾಗಲಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲ್, ಸುಳ್ಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಶಾ ನಾಯಕ್, ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್‌ ಕುತ್ತಮೊಟ್ಟೆ, ಪಂಚಾಯತ್ ಸದಸ್ಯರಾದ ಶಿವನಂದ ಕುಕ್ಕುಂಬಳ, ಮಾಲಿನಿ ವಿನೋದ್, ಪುಷ್ಪಾಧರ ಕೊಡೆಂಕಿರಿ, ಶ್ವೇತ ಅರಮನೆಗಯ, ಸಿ.ಆರ್.ಪಿ. ಮಮತಾ, ನೌಕರ ಸಂಘದ ಸುಳ್ಯ ತಾಲೂಕು ಅಧ್ಯಕ್ಷೆ ಧನಲಕ್ಷ್ಮಿ, ಎಸ್.ಡಿ.ಎಂ.ಸಿ.ಅಧ್ಯಕ್ಷ ಸುರೇಶ್ ಯು.ಕೆ. ಹಿರಿಯ ವಿದ್ಯಾರ್ಥಿ ಸಂಘ ದ ಅಧ್ಯಕ್ಷ ಸತೀಶ್ ನಾಯ್ಕ,ನಿವೃತ್ತ ಉಪನ್ಯಾಸಕ ಅಬ್ದುಲ್ ಮಾಸ್ತರ್, ಅಭಿನಂದನ ಸಮಿತಿ ಅಧ್ಯಕ್ಷ ತೀರ್ಥರಾಮ ಅಡ್ಕಬಳೆ,ಅನ್ವರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಶನ್ ಅಧ್ಯಕ್ಷ ಮಜೀದ್ ಉಪಸ್ಥಿರಿದ್ದರು.
ಮುಖ್ಯ ಶಿಕ್ಷಕ ಗೋಪಾಲಕೃಷ್ಣ ಬನ ಸ್ವಾಗತಿಸಿದರು.
ಶಿಕ್ಷಕಿ ಭಾನುಮತಿ ಕಾರ್ಯಕ್ರಮ ನಿರೂಪಿಸಿದರು.

Ad Widget . Ad Widget . Ad Widget . . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top