October 2024

ಮುಲ್ತಾಝ್ ಅಲಿ ಸಾವು : ಪೊಲೀಸ್ ತನಿಖೆ ಚುರುಕು

ಉದ್ಯಮಿ ಮುಲ್ತಾಝ್ ಅಲಿ ಸಾವು ಕೇಸ್ ಗೆ ಸಂಬಂಧಿಸಿದಂತೆ ಇಂದು ಪೊಲೀಸರ ತನಿಖೆ ಚುರುಕುಗೊಂಡಿದೆ. ಪ್ರಕರಣದ ಸೂತ್ರದಾರ ಹಾಗೂ ಎ2 ಆರೋಪಿ ಕೃಷ್ಣಾಪುರ ನಿವಾಸಿ ಅಬ್ದುಲ್ ಸತ್ತಾರ್, ಎ3 ಆರೋಪಿ ಮುಹಮ್ಮದ್ ಮುಸ್ತಫಾ, 4ನೇ ಆರೋಪಿ ಬಂಟ್ವಾಳ ತಾಲೂಕಿನ ನಂದಾವರ ನಿವಾಸಿ ಶಾಫಿಯನ್ನು ನಿನ್ನೆ ಕೋರ್ಟ್ ಗೆ ಹಾಜರುಪಡಿಸಿದ್ದ ಕಾವೂರು ಪೊಲೀಸರು, ಏಳು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಈ ಮೂವರು ಆರೋಪಿಗಳನ್ನು ಅ. 9ರಂದು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

ಮುಲ್ತಾಝ್ ಅಲಿ ಸಾವು : ಪೊಲೀಸ್ ತನಿಖೆ ಚುರುಕು Read More »

ಬಿ.ಪಿ.ಎಲ್ ಕಾರ್ಡ್ ರದ್ದಾದವರಿಗೆ ಎ.ಪಿ.ಎಲ್ ಕಾರ್ಡ್ ವಿತರಣೆ: ಸಚಿವ ಮುನಿಯಪ್ಪ

ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ಗಳ ಪತ್ತೆ ಹಚ್ಚುವ ಕಾರ್ಯ ಭರದಿಂದ ಸಾಗಿದೆ. ಕಳ್ಳ ಮಾರ್ಗದಿಂದ BPL ಕಾರ್ಡ್ ಪಡೆದುಕೊಂಡಿದ್ದರೆ ರದ್ದಾಗುತ್ತದೆ. ಈ ನಡುವೆ ಆಹಾರ ಸಚಿವ ವಿ.ಮುನಿಯಪ್ಪ ಸಂತಸದ ಸುದ್ದಿಯೊಂದನ್ನು ನೀಡಿದ್ದಾರೆ. ಕೋಲಾರದಲ್ಲಿ ಶುಕ್ರವಾರ ಮಾತನಾಡಿದ ಅವರು, BPL ಕಾರ್ಡ್ ರದ್ದಾದರೂ ಕೂಡ ಆ ಸದಸ್ಯರನ್ನ APL ಕಾರ್ಡ್‌ಗೆ ವರ್ಗಾಯಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೆ ಅನ್ನಭಾಗ್ಯ ಹಣ ಕೂಡ ವರ್ಗಾವಣೆಯಾಗುತ್ತದೆ ಸರ್ವರ್ ಸಮಸ್ಯೆಯಿಂದ ಹಣ ವರ್ಗಾವಣೆಯಲ್ಲಿ ವಿಳಂಬವಾಗಿದೆ ಎಂದು ತಿಳಿಸಿದ್ದಾರೆ.

ಬಿ.ಪಿ.ಎಲ್ ಕಾರ್ಡ್ ರದ್ದಾದವರಿಗೆ ಎ.ಪಿ.ಎಲ್ ಕಾರ್ಡ್ ವಿತರಣೆ: ಸಚಿವ ಮುನಿಯಪ್ಪ Read More »

ಸುಳ್ಯ ದಸರಾ ಉತ್ಸವದಲ್ಲಿ ಮನರಂಜಿಸಿದ ಭಜನಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

ಸುಳ್ಯ:ಸುಳ್ಯ ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿ ಸುಳ್ಯ ವತಿಯಿಂದ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ‘ಸುಳ್ಯ ದಸರಾ’ ಅ.9 ರಿಂದ ಅ.17ರ ತನಕ ಶ್ರೀ ಚೆನ್ನಕೇಶವದ ದೇವಸ್ಥಾನದಮುಂಭಾಗದ ಶಾರದಾಂಬಾ ಕಲಾ ವೇದಿಕೆಯಲ್ಲಿ ಅದ್ದೂರಿಯಾಗಿ ನಡೆಯುತಿದೆ. ಅ.11ರಂದು ದಿನಪೂರ್ತಿ ಭಜನೋತ್ಸವ ನಡೆಯಿತು ವಿವಿಧ ಭಜನಾ ತಂಡಗಳಿಂದ ಭಜನೆ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಮಹಾಪೂಜೆ ನಡೆಯಿತು.

ಸುಳ್ಯ ದಸರಾ ಉತ್ಸವದಲ್ಲಿ ಮನರಂಜಿಸಿದ ಭಜನಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ Read More »

ರೈಲುಗಳ ನಡುವೆ ಭೀಕರ ಅಪಘಾತ

ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಕವರಪ್ಪೆಟ್ಟೆ ರೈಲು ನಿಲ್ದಾಣದ ಬಳಿ ಶುಕ್ರವಾರ ರಾತ್ರಿ ಪ್ಯಾಸೆಂಜ‌ರ್ ಎಕ್ಸ್‌ಪ್ರೆಸ್ ರೈಲು, ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದಿದೆ. ಈ ಅವಘಡದಲ್ಲಿ ಪ್ಯಾಸೆಂಜರ್ ಎಕ್ಸ್‌ಪ್ರೆಸ್ ರೈಲಿನ 2 ಬೋಗಿಗಳಿಗೆ ಬೆಂಕಿ ತಗುಲಿದೆ. ಪ್ಯಾಸೆಂಜ‌ರ್ ರೈಲಿನ ಕೆಲವು ಬೋಗಿಗಳು ಹಳಿತಪ್ಪಿದ್ದು ಯಾವುದೇ ಪ್ರಾಣಹಾನಿಯ ಕುರಿತು ವರದಿಯಾಗಿಲ್ಲ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ರೈಲುಗಳ ನಡುವೆ ಭೀಕರ ಅಪಘಾತ Read More »

ಸುಳ್ಯದಲ್ಲಿ ಕುಂ.ಕುಂ.ಪ್ಯಾಶನ್ ಸಹ ಸಂಸ್ಥೆ ರೊಮ್ಯಾಂಟಿಕ್ ವಸ್ತ್ರ ಮಳಿಗೆ ಲೋಕಾರ್ಪಣೆ

ಸುಳ್ಯದ ಪ್ರಖ್ಯಾತ ವಸ್ತ್ರ ಮಳಿಗೆ ಕುಂ..ಕುಂ.. ಫ್ಯಾಶನ್ ನವರ ಸಹ ಸಂಸ್ಥೆ ರೊಮ್ಯಾಂಟಿಕ್ ವಸ್ತ್ರ ಮಳಿಗೆ ಸುಳ್ಯ ರಥಬೀದಿಯಲ್ಲಿನ ನಂದಿನಿ ಟವರ್ಸ್‌ ನಲ್ಲಿ ಶುಕ್ರವಾರ ಶುಭಾರಂಭಗೊಂಡಿತು.ನಂದಿನಿ ಟವರ್ಸ್ ಮಾಲಕ, ಹಿರಿಯರಾದ ಗುಡ್ಡಪ್ಪ ರೈ ಮೇನಾಲರು ನೂತನ ವಸ್ತ್ರ ಮಳಿಗೆಯಲ್ಲಿ ರಿಬ್ಬನ್ ಕತ್ತರಿಸಿ ವಸ್ತ್ರ ಮಳಿಗೆಯನ್ನು ಉದ್ಘಾಟಿಸಿದರು.ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ.ಯವರು ದೀಪ ಪ್ರಜ್ವಲನೆಗೊಳಿಸಿದರು.ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಕುಂ..ಕುಂ.. ಫ್ಯಾಶನ್ ಸಂಸ್ಥೆ ಕಾರ್ಯಾಚರಿಸುತ್ತಿರುವ ಕಟ್ಟಡದ ಮಾಲಕರಾದ ಪ್ರೇಮಲತಾ,

ಸುಳ್ಯದಲ್ಲಿ ಕುಂ.ಕುಂ.ಪ್ಯಾಶನ್ ಸಹ ಸಂಸ್ಥೆ ರೊಮ್ಯಾಂಟಿಕ್ ವಸ್ತ್ರ ಮಳಿಗೆ ಲೋಕಾರ್ಪಣೆ Read More »

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಆಯುಧ ಪೂಜೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅ.11 ರಂದು ಆಯುಧ ಪೂಜಾ ಕಾರ್ಯಕ್ರಮವನ್ನು ಆರ್ಚಕರಾದ ನಾರಾಯಣ ಭಟ್ ಇವರ ಪೌರೋಹಿತ್ಯದಲ್ಲಿ ನಡೆಸಿಲಾಯಿತು. ಈ ಸಂದರ್ಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಚಿದಾನಂದ ಕೆ.ವಿ., ಪ್ರಧಾನ ಕಾರ್ಯದರ್ಶಿಗಳಾದ ಮಿ. ಅಕ್ಷಯ್ ಕೆ.ಸಿ., ಉಪಾಧ್ಯಕ್ಷರಾದ ಶ್ರೀಮತಿ. ಶೋಭಾ ಚಿದಾನಂದ, ಕೆ.ವಿ. ಜಿ . ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದ ಡೀನ್ ನೀಲಾಂಬಿಕೈ ನಟರಾಜನ್, ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ.,

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಆಯುಧ ಪೂಜೆ Read More »

ಪಾರ್ಸಿ ಸಮುದಾಯದ ಸಂಪ್ರದಾಯದ ಮೂಲಕ ಖ್ಯಾತ ಉದ್ಯಮಿ ರತನ್ ಟಾಟಾ ಅಂತ್ಯಕ್ರಿಯೆ

ಮುಂಬಯಿ: ಅ.9ರಂದು ನಿಧನರಾದ ಖ್ಯಾತ ಉದ್ಯಮಿ ರತನ್ ಟಾಟಾ ಅವರ ಅಂತ್ಯಕ್ರಿಯೆ ಅ.10ರಂದು ಸಕಲ ಸರಕಾರಿ ಗೌರವದೊಂದಿಗೆ ಪಾರ್ಸಿ ಸಮುದಾಯದ ವಿಧಿವಿಧಾನಗಳ ಪ್ರಕಾರ ನಡೆಸಲಾಯಿತುಬಳಿಕ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು.ಟಾಟಾ ಅವರ ಪಾರ್ಥಿವ ಶರೀರವನ್ನು ದಕ್ಷಿಣ ಮುಂಬೈನ ನಾರಿಮನ್ ಪಾಯಿಂಟ್‌ನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್‌ನಲ್ಲಿ (ಎನ್‌ಸಿಪಿಎ) ಗುರುವಾರ ಬೆಳಗ್ಗೆ 10.30 ರಿಂದ ಸಂಜೆ 4 ರವರೆಗೆ ಸಾರ್ವಜನಿಕರಿಗೆ ಗೌರವ ಸಲ್ಲಿಸಲು ಇಡಲಾಗಿತ್ತ.ಗಣ್ಯರು ಸೇರಿ ಸಾವಿರಾರು ಜನರು ಅಂತಿಮ ನಮನ ಸಲ್ಲಿಸಿದರು.

ಪಾರ್ಸಿ ಸಮುದಾಯದ ಸಂಪ್ರದಾಯದ ಮೂಲಕ ಖ್ಯಾತ ಉದ್ಯಮಿ ರತನ್ ಟಾಟಾ ಅಂತ್ಯಕ್ರಿಯೆ Read More »

ಮನರಂಜಿಸಿದ ನೃತ್ಯ ಸಂಕಲ್ಪಂ’ ಭರತನಾಟ್ಯ ಕಾರ್ಯಕ್ರಮ

ಸುಳ್ಯ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿಯ ವತಿಯಿಂದ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ಸುಳ್ಯ ದಸರಾ -2024ರ ಅಂಗವಾಗಿ ದಿನ ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.ಎರಡನೇ ದಿನದ ಗುರುವಾರ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನಾಟ್ಯ ನಿಲಯಂ ಗುರು ಬಾಲಕೃಷ್ಣ ಮಂಜೇಶ್ವರ ಹಾಗೂ ಶಿಷ್ಯ ವೃಂದದವರಿಂದ ‘ನೃತ್ಯ ಸಂಕಲ್ಪಂ’ ಭರತನಾಟ್ಯ ಕಾರ್ಯಕ್ರಮ ಜರುಗಿತು.

ಮನರಂಜಿಸಿದ ನೃತ್ಯ ಸಂಕಲ್ಪಂ’ ಭರತನಾಟ್ಯ ಕಾರ್ಯಕ್ರಮ Read More »

ರಸ್ತೆ ಬದಿಯ ತಡೆಬೇಲಿಗೆ ಕಾರು ಡಿಕ್ಕಿ ಹೊಡೆದು ಜಖಂಗೊಂಡ ಕಾರು

ಸುಳ್ಯದ ಶ್ರೀರಾಮಪೇಟೆಯಲ್ಲಿ ಕಾರೊಂದು ರಸ್ತೆ ಬದಿಯ ತಡೆಬೇಲಿಗೆ ಗುದ್ದಿದ್ದು ಕಾರಿನ ಎದುರು ಭಾಗ ಸಂಪೂರ್ಣ ಹಾನಿಗೊಂಡ ಘಟನೆ ವರದಿಯಾಗಿದೆ.ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನಿಂದ ಬಿಸಿ ರೋಡಿಗೆ ಹೋಗುವ ಸ್ಕೊಡ ಕಾರು ಚಾಲಕನ ನಿಯಂತ್ರಣ ತಪ್ಪಿ ತಡೆಬೇಲಿಗೆ ಗುದ್ದಿ ತಡೆಬೇಲಿ ಮುರಿದು ಕಾರು ಸಂಪೂರ್ಣ ಜಖಂಗೊಂಡಿದೆ.

ರಸ್ತೆ ಬದಿಯ ತಡೆಬೇಲಿಗೆ ಕಾರು ಡಿಕ್ಕಿ ಹೊಡೆದು ಜಖಂಗೊಂಡ ಕಾರು Read More »

ವಿಷ ಸೇವಿಸಿ ವ್ಯಕ್ತಿ ಆತ್ಮ ಹತ್ಯೆ

ಅಜ್ಜಾವರ : ಅಜ್ಜಾರ ಗ್ರಾಮದ ಮೇನಾಲ ರಿಕ್ಷಾ ಚಾಲಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.10ರಂದು ವರದಿಯಾಗಿದೆ. ಆತ್ಮ ಹತ್ಯೆಮಾಡಿಕೊಂಡ ವ್ಯಕ್ತಿಯನ್ನು ಭಾಸ್ಕರ ಎಂದು ಗುರುತಿಸಲಾಗಿದೆ. ಮಧ್ಯಾಹ್ನದ ಬಳಿಕ ಬಾಸ್ಕರ ರೈ ಯವರು ಕಾಣದೇ ಇದ್ದಾಗ ಮನೆಯವರು ಮತ್ತು ಸ್ಥಳೀಯರು ಹುಡುಕಾಟ ಪ್ರಾರಂಭಿಸಿದ್ದು ಸಂಜೆ ತೋಟದಲ್ಲಿ ವಿಷ ಸೇವಿಸಿ ಸಾವಿಗೆ ಶರಣಾಗಿರುವುದು ಕಂಡುಬಂದಿದ್ದು ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ .

ವಿಷ ಸೇವಿಸಿ ವ್ಯಕ್ತಿ ಆತ್ಮ ಹತ್ಯೆ Read More »

error: Content is protected !!
Scroll to Top